ಕಲಬುರಗಿ: ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರು ಲೋಕಾರ್ಪಣೆ ಮಾಡುತ್ತಿರುವ ಕೇಂದ್ರದ ಯೋಜನೆಗಳು ಚುನಾವಣೆ ಮುಗಿಯುವವರೆಗೆ ಜಾರಿಯಲ್ಲಿರಲಿವೆ ಎಂದು ಕಲಬುರಗಿ ಉತ್ತರ ಮತ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಶಕೀಲ್ ಸರಡಗಿ ವ್ಯಂಗ್ಯವಾಗಿಸಿ ಟೀಕಿಸಿದರು.
ಕಳೆದ ಐದು ವರ್ಷಗಳಿಂದ ಗಾಢನಿದ್ದೆಗೆ ಜಾರಿದ ಸಂಸದರು ಕೇವಲ ಮನವಿ ಪತ್ರಗಳು ನೀಡುವಲ್ಲಿ ಕಳೆದರು. ಲೋಕಸಭಾ ಸದಸ್ಯರಾಗಿ ಐದು ವರ್ಷಗಳಲ್ಲಿ ಕ್ಷೇತ್ರದ ಜನರಿಗಾಗಿ ಯಾವುದೇ ರೀತಿ ಯೋಜನೆಗಳನ್ನು ತರಲು ಸಾಧ್ಯವಾಗಲಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಸಣ್ಣಪುಟ್ಟಕ್ಕೆ ಭಾರಿ ಪ್ರಚಾರ ಪಡೆಯಲು ಯತ್ನಿಸುತ್ತಿರುವುದು ಸಾರ್ವಜನಿಕರಿಗೆ ಯಾಮಾರಿಸುತ್ತಿರುವುದು ಗೊತ್ತಾಗುತ್ತಿದೆ. ಸದ್ಯ ಲೋಕಾರ್ಪಣೆಗೊಳ್ಳುತ್ತಿರುವ ಸೌಲಭ್ಯಗಳು ಚುನಾವಣೆ ನಂತರ ಮುಂದುವರೆಸುವುದು ಕಷ್ಟ. ಕೇವಲ ಚುನಾವಣೆಗಾಗಿ ಇಂತಹ ಗಿಮ್ಮಿಕ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.
ಲೋಕಸಭೆ ಚುನಾವಣೆಯಲ್ಲಿ ಮತದಾರರ ಬಳಿ ಹೊದರೆ ಐದುವರ್ಷದಲ್ಲಿ ಪ್ರತಿವರ್ಷ ತಾವು ಏನು ಮಾಡಿದ್ದಿರಿ ಯಾವ ಯೋಜನೆಗಳನ್ನು ತಂದಿರಿ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…