ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಆರ್ ಅಶೋಕ್ ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮಪಂಚಾಯತ ಚುನಾವಣೆ ಗೆದ್ದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷವಾಗಿ ಪ್ರತಿಕ್ರಿಯಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅವರಿಗೆ ತಲೆ ಕೆಟ್ಟಿದೆ, ಮಾನಸಿಕ‌ ಸಮತೋಲನ ಕಳೆದುಕೊಂಡಿದ್ದಾರೆ ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

ಪ್ರಿಯಾಂಕ್ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ’ ಎಂದು ಜಾಧವ ಹೇಳಿದ್ದಾರೆ, ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದರು ಯಾರು ? ಎಂದು ತಿರುಗೇಟು ನೀಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಪುನರುಚ್ಚರಿಸಿದ ಸಚಿವರು, ಗುಜರಾತ್ ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್ ಗಳಾಗಿವೆ ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು ಅದನ್ನು ಕಾನೂನು ಸುವ್ಯವಸ್ಥೆ‌ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ ಎಂದು ಮಾರುತ್ತರ ನೀಡಿದರು.

ಅಪರಂಜಿ ಎಲ್ಲಿ ?; ಚಿತ್ತಾಪುರದ ಅಪರಂಜಿ ಈಗ ಎಲ್ಲಿ ? ಎಂದು ಜಾಧವ್ ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್ ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.

ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್,ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್ ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.

ಪ್ರೊಟೋಕಾಲ್ ಮರೆತವರು; ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ ಎಂದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420