ಮಾಜಿ ಸಚಿವೆ ಡಾ.ಲೀಲಾದೇವಿ ಪ್ರಸಾದ್ ಗೆ ಪ್ರತಿಷ್ಠಿತ ಮಾತೋಶ್ರೀ ಗೋದುತಾಯಿ ಅವ್ವಾಜಿ ಪ್ರಶಸ್ತಿ ಪ್ರದಾನ

ಕಲಬುರಗಿ; ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ಶರಣಬಸವೇಶ್ವರ ಸಂಸ್ಥಾನದಿಂದ ಸ್ಥಾಪಿಸಿರುವ ಪ್ರತಿಷ್ಠಿತ ಮಾತೋಶ್ರೀ ಗೋದುತಾಯಿ ಅವ್ವಾಜಿ ಪ್ರಶಸ್ತಿಯನ್ನು ಮಾಜಿ ಸಚಿವೆ ಹಾಗೂ ಬಸವ ಸಮಿತಿ ಉಪಾಧ್ಯಕ್ಷ ಡಾ. ಲೀಲಾದೇವಿ ಪ್ರಸಾದ್ ಅವರಿಗೆ ನೀಡಿ ಗೌರವಿಸಿದರು.

ಡಾ. ಲೀಲಾದೇವಿ ಪ್ರಸಾದ್ ಅವರು ಮಹಿಳೆಯರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಬೆಂಗಳೂರು ಹಾಗೂ ಇತರ ಸ್ಥಳಗಳಲ್ಲಿನ ತಮ್ಮ ಸಹಾಯಕ ಘಟಕಗಳಲ್ಲಿ ಸಾವಿರಾರು ಮಹಿಳೆಯರಿಗೆ ಜೀವನೋಪಾಯವನ್ನು ಒದಗಿಸುವಲ್ಲಿ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿದರು.

ಶರಣಬಸವೇಶ್ವರ ಸಂಸ್ಥಾನದ 7ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಧರ್ಮಪತ್ನಿ ಮಾತೋಶ್ರೀ ಗೋದುತಾಯಿ ಅವ್ವಾಜಿ ಅವರ ಇಚ್ಛೆಯಂತೆ 1934 ರಲ್ಲಿ, ಕಲಬುರಗಿಯ ಮೊದಲ ವಿಶೇಷ ಬಾಲಕಿಯರ ಶಾಲೆಯಾದ ಮಹಾದೇವಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಆರಂಭಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಂಸ್ಥಾನದ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೆ ದಾರಿ ಮಾಡಿಕೊಟ್ಟಿತು. ಪ್ರತೀವರ್ಷ ಗೋದುತಾಯಿ ಅವ್ವಾಜಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಲೀಲಾದೇವಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಆಶೀರ್ವಾದ ಕೋರಿ ಐದು ದಶಕಗಳ ಹಿಂದೆ ಶರಣಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿ ದಾಸೋಹ ಮಹಾಮನೆಯಲ್ಲಿ ಪೂಜ್ಯ ಗೋದುತಾಯಿ ಅವ್ವಾಜಿ ಅವರನ್ನು ಭೇಟಿ ಮಾಡಿದ್ದನ್ನು ಸ್ಮರಿಸಿದರು. ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರು ಕಲ್ಯಾಣ ಕರ್ನಾಟಕ ಭಾಗದ ಜನರನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಹತ್ತು-ಹಲವಾರು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಮೂಲಕ ಮತ್ತು ಇಡೀ ಪ್ರದೇಶದ ಮೊದಲ ಖಾಸಗಿ ವಿಶ್ವವಿದ್ಯಾಲಯವಾದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕವಾಗಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಒಂದು ವಾರ ಕಾಲ ನಡೆಯುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಲೀಲಾದೇವಿ ಪ್ರಸಾದ್, ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ಹಾಗೂ ಸ್ವಾವಲಂಬಿಗಳಾಗಿದ್ದರೆ ಮಾತ್ರ ಮಹಿಳೆಯರ ನಿಜವಾದ ಸಬಲೀಕರಣವನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು. ಆರ್ಥಿಕ ಸಬಲೀಕರಣವಿಲ್ಲದಿದ್ದರೆ, ಮಹಿಳೆಯರ ಸಂಪೂರ್ಣ ಅಥವಾ ನಿಜವಾದ ಸಬಲೀಕರಣವು ಮರೀಚಿಕೆಯಾಗುತ್ತದೆ. ಮಹಿಳೆಯರ ಆರ್ಥಿಕ ಸಬಲೀಕರಣದ ಜೊತೆಗೆ, ವಿಧಾನಸಭೆ ಮತ್ತು ಸಂಸತ್ತಿನ ಅಧಿಕಾರದ ಕಾರಿಡಾರ್‍ಗಳಲ್ಲಿ ತಮ್ಮ ಪಾಲನ್ನು ಒದಗಿಸುವ ಮೂಲಕ ಅವರು ರಾಜಕೀಯ ಶಕ್ತಿಯೊಂದಿಗೆ ಸಬಲರಾಗಬೇಕು ಎಂದು ಕರೆ ನೀಡಿದರು.

ಚುನಾಯಿತ ಸಂಸ್ಥೆಗಳಲ್ಲಿ ಮಹಿಳೆಯರ ಮೀಸಲಾತಿಗಾಗಿ ನಡೆಯುತ್ತಿರುವ ಚಳುÀವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಡಾ ಪ್ರಸಾದ್, ಸ್ವಾತಂತ್ರ್ಯದ ನಂತರ ಚುನಾಯಿತ ಸಂಸ್ಥೆಗಳಲ್ಲಿ ವಿಶೇಷವಾಗಿ ರಾಜ್ಯ ವಿಧಾನಸಭೆಗಳು ಮತ್ತು ಸಂಸತ್ತುಗಳಲ್ಲಿ ಮಹಿಳಾ ಪ್ರಾತಿನಿಧ್ಯವು ತೀವ್ರವಾಗಿ ಕುಸಿದಿತ್ತು. ಹಾಗೆಯೇ ಮಹಿಳೆಯರು ಅಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆಗ ಯಾವುದೇ ಮಹಿಳೆಯರು ಕೇಳಲಿಲ್ಲ ಮತ್ತು ಅದನ್ನು ಪರಿಹರಿಸಲಿಲ್ಲವಾದ್ದರಿಂದ ಹೋರಾಟಕ್ಕಿಳಿಯಬೇಕಾಯಿತು. ಆದರೆ, ಸುದೀರ್ಘ ಹೋರಾಟದ ನಂತರ ಅಂತಿಮವಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಮೂಲಕ ಚುನಾಯಿತ ಸಂಸ್ಥೆಗಳಲ್ಲಿ, ವಿಶೇಷವಾಗಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿ ದೊರಕಿದೆ ಎಂದು ಅವರು ಹರ್ಷದಿಂದ ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ಮತ್ತು ರಾಮನ್ ಮ್ಯಾಗ್ಸೆಸೆ ಉದಯೋನ್ಮುಖ ನಾಯಕಿ ವಿಜೇತೆ ಶ್ರೀಮತಿ ನಿಲೀಮಾ ಮಿಶ್ರಾ, ಮತ್ತು ಮಹಾರಾಷ್ಟ್ರ ಮೂಲದ ಭಗಿನಿ ನಿವೇದಿತಾ ಗ್ರಾಮೀಣ ವಿಜ್ಞಾನ ನಿಕೇತನ್, ಅವರು ಶರಣಬಸವ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಒಂದು ವಾರದ ಅಂತÀರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡ, ಇಂದು ಮಹಿಳಾ ಕುಶಲಕರ್ಮಿಗಳಿಗೆ, ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶಗಳು ಹೇರಳವಾಗಿವೆ ಇದರಿಂದ ಮಹಿಳೆಯರು ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಿಬಹುದು. ಮಹಿಳೆಯರು ಸ್ವಾವಲಂಬನೆಯನ್ನು ಸಾಧಿಸಲು ಮತ್ತು ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲಲು “ತಮಗೆ ಸಹಾಯ ಮತ್ತು ಇತರರಿಗೆ ಸಹಾಯ” ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲರಲ್ಲಿ ಸಹಕರಿಸಬೇಕು ಎಂದು ಹೇಳಿದರು.

ಇದಕ್ಕೂ ಮೊದಲು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿಯವರಿಗೆ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮಹಿಳಾ ಸಬಲೀಕರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿ, ಅಧ್ಯಾಪಕರ ನೇಮಕಾತಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡುವಲ್ಲಿ ಮಹಿಳಾ ಸಬಲೀಕರಣವನ್ನು ರೂಢಿಸಿಕೊಂಡ ಅನೇಕ ಉದಾಹರಣೆಗಳಾಗಿವೆ ಎಂದರು.

ಶರಣಬಸವ ವಿಶ್ವವಿದ್ಯಾಲಯವು ಮಹಿಳಾ ಕೇಂದ್ರಿತ ವಿಶ್ವವಿದ್ಯಾಲಯವಾಗಿದ್ದು, ವಿ.ವಿ.ಯಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಮಹಿಳೆಯರಿದ್ದು, ವಿದ್ಯಾರ್ಥಿಗಳಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಎಲ್ಲಾ ವಿಭಾಗಗಳಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಪ್ರವೇಶವನ್ನು ಹೊಂದಿದ್ದಾರೆ ಎಂದು ಅವರು ಸಂತಸದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಸ್ವಾಗತಿಸಿದರು.

ವೇದಿಕೆ ಮೇಲೆ ವಿ.ವಿ.ಯ ಸಮಕುಲಪತಿ ಡಾ. ವಿ.ಡಿ.ಮೈತ್ರಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್.ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಪೆÇ್ರ. ಕಿರಣ ಮಾಕಾ, ನವದೆಹಲಿಯ ಐಇಟಿಇ ಆಡಳಿತ ಮಂಡಳಿ ಸದಸ್ಯೆ ಡಾ. ಡಿ.ಸಿ. ಶುಭಾಂಗಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420