ಸುರಪುರ:ತಹಸಿಲ್ದಾರ್ ಕಚೇರಿಯಲ್ಲಿ ಟಾಸ್ಕ್ ಫೋರ್ಸ್ ಸಭೆ

0
14

ಸುರಪುರ:ತಾಲೂಕಿನಾದ್ಯಂತ ಎಲ್ಲಾ ಮೂರು ಹೋಬಳಿಗಳಲ್ಲಿ ಎಲ್ಲಿಯೂ ಕುಡಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ತಹಸಿಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.

ನಗರದ ತಹಸಿಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕುಡಿಯುವ ನೀರಿನ ಕುರಿತು ಮುಂಜಾಗ್ರತೆಗಾಗಿ ಹಮ್ಮಿಕೊಂಡಿದ್ದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪ್ರತಿ ವಾರಕ್ಕೊಮ್ಮೆ ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ನಮ್ಮ ತಾಲೂಕಿನಲ್ಲಿ ಕೆಂಭಾವಿ ಹೋಬಳಿಯ ಯಕ್ತಾಪುರ ಗ್ರಾಮ ಪಂಚಾಯತಿಯ 7 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದ್ದು,ಈ ಗ್ರಾಮಗಳಲ್ಲಿ ಬೋರವೆಲ್‍ಗಳ ಮೂಲಕ ನೀರು ಸರಬರಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು,ಅಲ್ಲದೆ ಹೆಚ್ಚಿನ ಸಮಸ್ಯೆಯಾದಲ್ಲಿ ಟ್ಯಾಂಕ್ ಮೂಲಕವೂ ನೀರು ಸರಬರಾಜು ಮಾಡಲಾಗುವುದು,ತಾಲೂಕಿನ ಕಕ್ಕೇರಾ ಪುರಸಭೆಯ ಎರಡು ವಾರ್ಡ್‍ಗಳಲ್ಲಿ ಸ್ವಲ್ಪ ಸಮಸ್ಯೆ ಇದೆ,ಮುಂಜಾಗ್ರತೆ ವಹಿಸಲಾಗುತ್ತದೆ ಎಂದರು.

Contact Your\'s Advertisement; 9902492681

ಅಲ್ಲದೆ ತಾಲೂಕಿನಲ್ಲಿ ಇನ್ನೂ 45 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹವಿದ್ದು ಜಾನುವಾರುಗಳಿಗೆ ಅಗತ್ಯವಿರುವ ಕಡೆಗಳಲ್ಲಿ ಮೇವು ಬ್ಯಾಂಕ್ ಆರಂಭಿಸಲಾಗುವುದು ಎಂದು ತಿಳಿಸಿದರು.ಅಲ್ಲದೆ ಕೆಬಿಜೆಎನ್‍ಎಲ್ ಎಇಇ ಅವರು ಕೂಡ ಸಭೆಯಲ್ಲಿ ಭಾಗವಹಿಸಿದ್ದು,ಎಡದಂಡೆ ಕಾಲುವೆಗೆ 0.03 ಟಿ.ಎಮ್.ಸಿ ನೀರು ಕುಡಿಯಲು ಅಗತ್ಯವಿದ್ದಾಗ ಬಿಡುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.ಈಗಾಗಲೇ ಸಹಾಯವಾಣಿಯನ್ನು ಆರಂಭಿಸಲಾಗಿದ್ದು,ಎಲ್ಲಿಯಾದೂ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಇಓ ಬಸವರಾಜ ಸಜ್ಜನ್,ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹಣಮಂತ್ರಾಯ ಪಾಟೀಲ್,ಪಶುಸಂಗೋಪನಾ ಇಲಾಖೆ ತಾಲೂಕು ಅಧಿಕಾರಿ ಸುರೇಶ ಹಚ್ಚಡ್,ನಗರಸಭೆ ಪ್ರಭಾರಿ ಪೌರಾಯುಕ್ತ ಶಾಂತಪ್ಪ,ಕೃಷಿ ಇಲಾಖೆ ಎಡಿ ಭೀಮರಾಯ ಹವಲ್ದಾರ್ ಸೇರಿದಂತೆ,ಕೆಂಭಾವಿ ಪುರಸಭೆ ಮುಖ್ಯಾಧಿಕಾರಿ,ಕಕ್ಕೇರಾ ಪುರಸಭೆ ಮುಖ್ಯಾಧಿಕಾರಿ,ಜೆಸ್ಕಾಂ ಇಲಾಖೆ ಎಇಇ,ಕೆಬಿಜೆಎನ್‍ಎಲ್ ಎಇಇ,ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here