ಸುರಪುರ: ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು ಎಂದು ವಿಶ್ವ ಹಿಂದೂ ರಕ್ಷಣಾ ಸೇನೆಯ ಅನೇಕರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮುಖಂಡರು,ಪ್ರತಾಪ್ ಸಿಂಹ ಒಬ್ಬ ದೂರದೃಷ್ಟಿಯ ಅಭಿವೃಧ್ಧಿ ಕನಸು ಹೊಂದಿರುವ ಸಂಸದರಾಗಿದ್ದಾರೆ,ಅವರು 10 ವರ್ಷದಲ್ಲಿ 11 ರೈಲುಗಳನ್ನು ತಂದಿರುವುದು ದೊಡ್ಡ ಸಾಧನೆಯಾಗಿದೆ,ಅಲ್ಲದೆ ಮೈಸೂರನ್ನು ಗ್ರೇಟರ್ ಮೈಸೂರು ಆಗಿ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡು,ಅಂತರಷ್ಟ್ರೀಯ ವಿಮಾನ ನಿಲ್ದಾಣ,ಮೆಟ್ರೋ ಮತ್ತು ಪೆರಿಫೆರಲ್ ರಿಂಗ್ ರೋಡ್ ಆಗಿ ಪರಿವರ್ತಿಸುವ ಯೋಜನೆಗಳೊಂದಿಗೆ ಕೊಡಗಿಗೆ ದೃಢವಾದ ಸಂಪರ್ಕವನ್ನು ಖಾತರಿಪಡಿಸುವ ಹಾಗೂ ಅಭಿವೃಧ್ಧಿಗೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡಿರುವ ಸಂಸದರು ಮತ್ತು ಉಗ್ರಗಾಮಿ ಸಿದ್ದಾಂತವನ್ನು ಕಟುವಾಗಿ ವಿರೋಧಿಸುತ್ತಾರೆ.
ಹಾಗಾಗಿ ಬಿಜೆಪಿ ಪಕ್ಷ 2024ರ ಲೋಕಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕೆಂದು ರಾಜ್ಯದ ಹಾಗೂ ಕೇಂದ್ರದ ಬಿಜೆಪಿ ನಾಯಕರುಗಳಿಗೆ ಕರ್ನಾಟಕ ರಾಜ್ಯದ ವಿಶ್ವ ಹಿಂದೂ ರಕ್ಷಣಾ ಸೇನಾ ರಾಜ್ಯಾಧ್ಯಕ್ಷರಾದ ಅರ್ಜುನ್ ಪಾರ್ಥ ಮತ್ತು ರಾಜ್ಯ ಪದಾಧಿಕಾರಿಗಳ ಪರವಾಗಿ ಆಗ್ರಹಿಸುವುದಾಗಿ ಮುಖಂಡರಾದ ಬಸವ ಶಾಸ್ತ್ರಿ ಕೋನಾಳ,ಶರಣು ನಾಯಕ ದೀವಳಗುಡ್ಡ ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…