ಬಿಸಿ ಬಿಸಿ ಸುದ್ದಿ

ಮಾ.17 ರಂದು `ಕಥಾ ಕಮ್ಮಟ-2024’: ಕಮ್ಮಟದ ಮಾಹಿತಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ತೇಗಲತಿಪ್ಪಿ

ಕಲಬುರಗಿ: ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಶೋಧಿಸಿ ಅವರಿಗೆ ಕಥೆ, ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ಕೊಡುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಮಾರ್ಚ್ 17 ರಂದು ಬೆಳಗ್ಗೆ 10.30 ಕ್ಕೆ ಒಂದು ದಿನದ `ಕಥಾ ಕಮ್ಮಟ’ವನ್ನು ಅಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಮ್ಮಟದ ವಿವರ ನೀಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ದಿನಕ್ಕೊಂದು ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಸಹೃದಯರ ಹೃದಯ ಗೆದ್ದಿದೆ. ಕಥೆ ರಚನೆಯ ಕುರಿತು ಇಡೀ ದಿನ ನಡೆಯುವ ಈ ಕಮ್ಮಟದಲ್ಲಿ ಚಿಂತನ-ಮಂಥನ ನಡೆಸಲಾಗುವುದು. ಇಂದು ಸಾಹಿತ್ಯ ಕ್ಷೇತ್ರದಿಂದ ದೂರ ಇರುವ ಯುವ ಸಮೂಹವನ್ನು ಸೆಳೆಯಲು ಇಂಥ ಕಮ್ಮಟಗಳು ಪೂರಕವಾಗಬಹುದು ಎಂಬ ಆಶಾಭಾವನೆ ಹೊಂದಲಾಗಿದೆ. ಜತೆಗೆ ಹೊಸ ಕಥೆಗಾರರ ಸೃಷ್ಠಿಗೆ ಕಾರಣವಾಗಲಿದೆ.

ಕಥೆ ಹೇಳುವುದು ಹೊಸತಲ್ಲ, ಪ್ರತಿಯೊಬ್ಬರಲ್ಲಿಯೂ ಕಥೆಗಳು ಹುಟ್ಟುತ್ತಿರುತ್ತವೆ. ನಮ್ಮ ಬದುಕಿನ ಸಂವಹನಕ್ಕೆ ಕಥೆಗಳು ಬಹಳ ಹತ್ತಿರ. ಮನಸ್ಸಿನಲ್ಲಿ ಹುಟ್ಟಿಕೊಳ್ಳುವ ಕಥೆಗಳಿಗೆ ವಸ್ತು ವಿಷಯಕ್ಕೆ ಆಕಾರ ರೂಪ ಕೊಟ್ಟು, ತಂತ್ರಗಾರಿಕೆಯಿಂದ ಹೆಣೆಯುವ ಕೌಶಲ್ಯ ಬೆಳೆಸುವುದು ಈ ಕಥಾ ಕಮ್ಮಟದ ಮೂಲ ಉದ್ದೇಶವಾಗಿದೆ ಎಂದು ವಿವರಿಸಿದರು.

ಹಿರಿಯ ಕಥೆಗಾರ ಸಿದ್ಧರಾಮ ಹೊನ್ಕಲ್ ಅವರು ಕಮ್ಮಟವನ್ನು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಶರಣಪ್ಪ ಸೈದಾಪೂರ,. ಪಿಡಿಓ ರಾಜೇಶ್ವರಿ ಸಾಹುವಾಡಿ, ಶಿಕ್ಷಣ ಇಲಾಖೆಯ ವಿ.ಎಂ. ಪತ್ತಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇಡೀ ದಿನ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಕಥಾ ಸಾಹಿತ್ಯದ ತತ್ವ-ಸತ್ವ-ಮಹತ್ವ ಎಂಬ ವಿಷಯದ ಕುರಿತು ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅವರು ಮಾತನಾಡಲಿದ್ದು, ಪ್ರೊ. ನೀಲಕಂಠ ಕಣ್ಣಿ, ಎಂ.ಬಿ.ನಿಂಗಪ್ಪ, ಧರ್ಮರಾಯ ಜವಳಿ, ಸಿದ್ಧರಾಮ ಸಿ ಸರಸಂಬಿ ಉಪಸ್ಥಿತರಿರುವರು.
ಕಥಾ ಸಾಹಿತ್ಯದಲ್ಲಿ ಶೈಲಿ-ತಂತ್ರ ಕುರಿತು ಹಿರಿಯ ಕಥೆಗಾರ ಡಾ. ಕೆ.ಎಸ್. ನಾಯಕ ಮಾತನಾಡಲಿದ್ದು, ಈರಯ್ಯಾ ಹಿರೇಮಠ, ಬಿ.ಜಿ.ಪಾಟೀಲ, ಸಂಜೀವಕುಮಾರ ಡೊಂಗರಗಾಂವ ಉಪಸ್ಥಿತರಿರುವರು.

ಕಥಾ ಸಾಹಿತ್ಯದ ಸ್ವರೂಪ-ವಸ್ತು-ಭಾಷೆ ಕುರಿತು ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ ಮಾತನಾಡಲಿದ್ದು, ಸಚೀನಕುಮಾರ ಮಣೂರೆ, ಸಂಜೀವ ಟಿ. ಮಾಲೆ, ಸಂತೋಷ ಪಾಟೀಲ ಉಪಸ್ಥಿತರಿರುವರು.

ಕಥಾ ಸೃಷ್ಠಿಗೆ ಬೇಕಾದುದೇನು? ವಿಷಯದ ಕುರಿತು ಕಥೆಗಾರ್ತಿ ಕಾವ್ಯಶ್ರೀ ಮಹಾಗಾಂವಕರ್ ಮಾತನಾಡಲಿದ್ದು, ಡಾ. ರಾಜಶೇಖರ ಮಾಂಗ್, ಚನ್ನಮಲ್ಲಯ್ಯ ಹಿರೇಮಠ, ಭಾಗ್ಯಲತಾ ಶಾಸ್ತ್ರೀ ಉಪಸ್ಥಿತರಿರುವರು.

ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಳಗಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಶಿವಶರಣಪ್ಪ ಮೋತಕಪಳ್ಳಿ, ಚಿಂತಕ ಡಾ. ರಾಘವೇಂದ್ರ ಚಿಂಚನಸೂರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಮ್ಮಟಕ್ಕೆ ಮೊದಲು ನೋಂದಣಿ ಮಾಡುವ ಕೇವಲ 30 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ನೋಂದಣಿ ಉಚಿತವಾಗಿ ಇದ್ದು, ಕಮ್ಮಟದಲ್ಲಿ ಭಾಗವಹಿಸಲಿಚ್ಛಿಸುವವರು ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮೊ. 98803 49025 ಗೆ ಸಂಪರ್ಕಿಸಲು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಮ್ಮಟದ ಸಂಚಾಲಕ ಧರ್ಮಣ್ಣ ಎಚ್ ಧನ್ನಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ, ಕಲ್ಯಾಣಕುಮಾರ ಶೀಲವಂತ, ಬಾಬುರಾವ ಪಾಟೀಲ, ಸೋಮಶೇಖರಯ್ಯ ಹೊಸಮಠ ಇತರರಿದ್ದರು.

ಇಂದಿನ ಆಧುನಿಕ ಜಗತ್ತಿನಲ್ಲಿ ಮೊಬೈಲ್‍ಗಾಗಿ ಹೆಚ್ಚು ಸಮಯವನ್ನು ಮೀಸಲಾಗಿಡುವ ಪರಿಪಾಠ ಬೆಳೆದಿದೆ. ಸಾಹಿತ್ಯ, ಸಾಂಸ್ಕøತಿಕ ವಿಚಾರಗಳ ಬಗ್ಗೆ ಹೆಚ್ಚು ಸಮಯ ಮೀಸಲಿಡುವುದರಿಂದ ಹೆಚ್ಚು ಪ್ರಯೋಜನವಿದೆ ಎಂಬುದನ್ನು ಪರಿಷತ್ತು ನಿರಂತರ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸಾಬೀತುಪಡಿಸಲಾಗುತ್ತಿದೆ. – ವಿಜಯಕುಮಾರ ತೇಗಲತಿಪ್ಪಿ- ಕಸಾಪ ಜಿಲ್ಲಾಧ್ಯಕ್ಷ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago