ಸೇಡಂನಲ್ಲಿ 16 ರಂದು ಮೂರು ಕವನ ಸಂಕಲನ ಬಿಡುಗಡೆ

0
51

ಸೇಡಂ: ಮಹಾದೇವಿ ಎಸ್. ಮೆಮೋರಿಯಲ್ ಪಬ್ಲಿಕ್ ಸ್ಕೂಲ್ ಮತ್ತು ನೃಪತುಂಗ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ಮಾ.16 ರಂದು ಬೆಳಿಗ್ಗೆ 10.15 ಕ್ಕೆ ಮೂರು ಕವನ ಸಂಕಲನಗಳ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶ್ರೀಶೈಲಕುಮಾರ ಮಠಪತಿ ಮತ್ತು ಜಗದೀಶ ಕಡಬಗಾಂವ ತಿಳಿಸಿದ್ದಾರೆ.

ಸೇಡಂ ತಾಲೂಕಿನ ಯಡಗಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಪ್ರಮೀಳಾ ಪಾಟೀಲ ಎಸ್.ಬಿಬ್ಬಳ್ಳಿ ಅವರು ರಚಿಸಿದ `ಅರಳಿದ ಮೊಗ್ಗು’ ಮತ್ತು `ಬೆಳದಿಂಗಳು’ ಹಾಗೂ ಶಾಲಾ ಮಕ್ಕಳಿಂದ ಬರೆದ ಕವನಗಳ ಸಂಕಲನವನ್ನು ಸಂಪಾದನೆ ಮಾಡಿದ `ಚಿಣ್ಣರ ಚಿಲಿಪಿಲಿ’ ಕೃತಿಗಳನ್ನು ಹಿರಿಯ ಸಾಹಿತಿಗಳಾದ ಡಾ.ಸ್ವಾಮಿರಾವ ಕುಲಕರ್ಣಿ ಬಿಡುಗಡೆ ಮಾಡುವರು.

Contact Your\'s Advertisement; 9902492681

ಪೂಜ್ಯರಾದ ಶ್ರೀ ಶಿವಶಂಕರ ಶಿವಾಚಾರ್ಯರು, ಶ್ರೀ ಪಂಚಾಕ್ಷರ ಮಹಾಸ್ವಾಮಿಗಳು ಮತ್ತು ಶ್ರೀ ಸದಾಶಿವ ಸ್ವಾಮಿಗಳು ಸಾನಿಧ್ಯ ವಹಿಸುವರು. ಈ ಸಮಾರಂಭವನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಿಸುವರು. ಸರಕಾರಿ ನಿವೃತ್ತ ನೌಕರ ಸಂಘದ ಅಧ್ಯಕ್ಷ ಶಿವಯ್ಯ ಸ್ವಾಮಿ ಬಿಬ್ಬಳ್ಳಿ ಅಧ್ಯಕ್ಷತೆ ವಹಿಸುವರು.

ಅರಳಿದ ಮೊಗ್ಗು ಮತ್ತು ಚಿಣ್ಣರ ಚಿಲಿಪಿಲಿ ಕೃತಿಗಳ ಕುರಿತು ನೃಪತುಂಗ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರಭಾಕರ ಜೋಶಿ ಹಾಗೂ ಬೆಳದಿಂಗಳು ಕೃತಿ ಕುರಿತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಮಾತನಾಡುವರು.

ಸೇಡಂ ಬಿಇಓ ಮಾರುತಿ ಹುಜರತಿ, ಸರಕಾರಿ ನೌಕರ ಗೃಹ ನಿರ್ಮಾಣ ಮಂಡಳಿ ಜಿಲ್ಲಾಧ್ಯಕ್ಷ ನಾಗಪ್ಪ ಹೊನ್ನಳ್ಳಿ, ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಲೇಖಕಿ ಡಾ.ಸುಜಾತಾ ಜಂಗಮಶೆಟ್ಟಿ, ಸ್ಕೌಟ್ಸ್ ಮತ್ತು ಗೈಡ್ಸನ ಕಲ್ಯಾಣ ಕರ್ನಾಟಕ ಉಸ್ತುವಾರಿ ಮಲ್ಲೇಶ್ವರಿ ಜೂಜಾರೆ ದಾವಣಗೆರೆ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಹೂಗಾರ, ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಅಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ, ಕಸಾಪ ತಾಲೂಕು ಅಧ್ಯಕ್ಷೆ ಸುಮಾ ಎಲ್.ಚಿಮ್ಮನಚೋಡ್ಕರ್, ಸರಕಾರಿ ನೌಕರ ಸಂಘದ ಅಧ್ಯಕ್ಷ ಶಿವಶಂಕ್ರಯ್ಯ ಇಮಡಾಪುರ, ಸರಕಾರಿ ಪ್ರೌಢಶಾಲೆ ಮುಖ್ಯಗುರುಗಳ ಸಂಘದ ಅಧ್ಯಕ್ಷ ಅಶೋಕರೆಡ್ಡಿ ಚಿಲುಮೆ, ಸರಕಾರಿ ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಅನೀಲ ಸುಬೇದಾರ, ಯಡಗಾ ಸರಕಾರಿ ಪ್ರೌಢಶಾಲೆ ಮುಖ್ಯಗುರು ಚನ್ನಬಸರೆಡ್ಡಿ ಕಿಷ್ಟಾಪುರ, ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಸಾಗರ ಮುಖ್ಯ ಅತಿಥಿಗಳಾಗಿರುವರು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here