ಕಲಬುರಗಿ: ಭಾರತೀಯ ಸಂಸ್ಕೃತಿ ಉತ್ಸವ-7 ಮತ್ತು ಕೊತ್ತಲ ಸ್ವರ್ಣ ಜಯಂತಿ ಸ್ವಾಗತ ಸಮಿತಿ ಸಭೆ ಮಾ.18 ರಂದು ಬೆಳಗ್ಗೆ 11 ಗಂಟೆಗೆ ನಗರದ ಖಮಿತಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಭಾರತ ವಿಕಾಸ ಸಂಗಮ, ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಹಾಗೂ ವಿಕಾಸ ಅಕಾಡೆಮಿ ಸಂಯುಕ್ತವಾಗಿ ಆಯೋಜಿಸಿದ ಸಭೆಯ ಸಾನ್ನಿಧ್ಯವನ್ನು ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಸುತ್ತೂರುಮಠದ ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ವಹಿಸುವರು.
ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಸೇಡಂ ಅಧ್ಯಕ್ಷರಾದ ಪೂಜ್ಯ ಸದಾಶಿವ ಸ್ವಾಮಿಗಳು, ಭಾರತ ವಿಕಾಸ ಸಂಗಮ ಸಂಸ್ಥಾಪಕ ಕೆ.ಎನ್.ಗೋವಿಂದಾಚಾರ್ಯರು, ವಿಕಾಸ ಅಕಾಡಮಿ ಸಂಯೋಜಕ ಬಸವರಾಜ ಪಾಟೀಲ ಸೇಡಂ ಭಾಗವಹಿಸಲಿದ್ದಾರೆ.
ಸ್ವಾಗತ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂದು ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಅನುರಾಧಾ ಪಾಟೀಲ, ವಿಕಾಸ ಅಕಾಡೆಮಿ ಸದಸ್ಯ ಮಾರ್ತಂಡ ಶಾಸ್ತ್ರಿ ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…