ವಾಡಿ ರೈಲ್ವೆ ನಿಲ್ದಾಣದಲ್ಲಿ ರೈಲು ಹಳಿ ಛೀದ್ರ; ನೆಲಕ್ಕುರುಳಿದ ಗೂಡ್ಸ್ ರೈಲು

0
42

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ವಾಡಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರ ತಾಳಲಾರದೇ ರೈಲು ಹಳಿ ಛಿದ್ರಗೊಂಡು ಗೂಡ್ಸ್ ಗಾಡಿ ನೆಲಕ್ಕುರುಳಿದ ಘಟನೆ ಜರುಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಿಕಂದ್ರಾಬಾದನಿಂದ ವಾಡಿ ಪಟ್ಟಣದ ಗೂಡ್ಸ್‌ ಯಾರ್ಡ್‌ಗೆ ಕಲ್ಲು ಹೊತ್ತುಕೊಂಡು ಬರುತ್ತಿದ್ದ ಗೂಡ್ಸ್ ಟ್ರೈನ್‌ನ ಭಾರ ತಾಳದೇ ಹಳಿಗಳು ಸೀಳಿದ್ದರಿಂದ ಏಕಾಏಕಿ ದೊಡ್ಡ ಸದ್ದಿನೊಂದಿಗೆ 5 ಬೋಗಿಗಳು ನೆಲಕ್ಕೆ ಬಿದ್ದಿವೆ.

Contact Your\'s Advertisement; 9902492681

ರೈಲು ನಿಲ್ದಾಣದ ಕ್ಯಾಂಟೀನ್‌ ಹತ್ತಿರವೇ ಈ ದುರ್ಘಟನೆ ಜರುಗಿದ್ದು ಸದ್ದಿಗೆ ಸುತ್ತಲೂ ಹಾಗೂ ರೈಲು ನಿಲ್ದಾಣದಲ್ಲಿ ಇದ್ದ ಜನರು ಗಾಬರಿಗೊಂಡರು. ಈ ಘಟನೆ ರೈಲು ಹಳಿಗಳ ನಿರ್ವಹಣೆ ಮೇಲೆ ಪ್ರಶ್ನೆಗಳು ಹುಟ್ಟುವಂತೆ ಮಾಡಿದ್ದು ಆತಂಕಕ್ಕೆ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡ ಕ್ರೇನ್‌ಗಳ ಸಹಾಯದಿಂದ ಹಳಿಗಳ ಮೇಲಿನ ಬೋಗಿಗಳ ವಿಲೇವಾರಿ ಕಾರ್ಯ ನಡೆಯುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here