ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ವಾಡಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರ ತಾಳಲಾರದೇ ರೈಲು ಹಳಿ ಛಿದ್ರಗೊಂಡು ಗೂಡ್ಸ್ ಗಾಡಿ ನೆಲಕ್ಕುರುಳಿದ ಘಟನೆ ಜರುಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಿಕಂದ್ರಾಬಾದನಿಂದ ವಾಡಿ ಪಟ್ಟಣದ ಗೂಡ್ಸ್ ಯಾರ್ಡ್ಗೆ ಕಲ್ಲು ಹೊತ್ತುಕೊಂಡು ಬರುತ್ತಿದ್ದ ಗೂಡ್ಸ್ ಟ್ರೈನ್ನ ಭಾರ ತಾಳದೇ ಹಳಿಗಳು ಸೀಳಿದ್ದರಿಂದ ಏಕಾಏಕಿ ದೊಡ್ಡ ಸದ್ದಿನೊಂದಿಗೆ 5 ಬೋಗಿಗಳು ನೆಲಕ್ಕೆ ಬಿದ್ದಿವೆ.
ರೈಲು ನಿಲ್ದಾಣದ ಕ್ಯಾಂಟೀನ್ ಹತ್ತಿರವೇ ಈ ದುರ್ಘಟನೆ ಜರುಗಿದ್ದು ಸದ್ದಿಗೆ ಸುತ್ತಲೂ ಹಾಗೂ ರೈಲು ನಿಲ್ದಾಣದಲ್ಲಿ ಇದ್ದ ಜನರು ಗಾಬರಿಗೊಂಡರು. ಈ ಘಟನೆ ರೈಲು ಹಳಿಗಳ ನಿರ್ವಹಣೆ ಮೇಲೆ ಪ್ರಶ್ನೆಗಳು ಹುಟ್ಟುವಂತೆ ಮಾಡಿದ್ದು ಆತಂಕಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡ ಕ್ರೇನ್ಗಳ ಸಹಾಯದಿಂದ ಹಳಿಗಳ ಮೇಲಿನ ಬೋಗಿಗಳ ವಿಲೇವಾರಿ ಕಾರ್ಯ ನಡೆಯುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…