ಬಿಸಿ ಬಿಸಿ ಸುದ್ದಿ

ಬಸವೇಶ್ವರ, ಸಂಗಮೇಶ್ವರ ಆಸ್ಪತ್ರೆಗೆ ನೂತನ ಕಾಯಕಲ್ಪ

ಕಲಬುರಗಿ: ಎಚ್‌ಕೆಇ ಸೊಸೈಟಿಗೆ ಹೊಸ ಸದಸ್ಯತ್ವ ನೋಂದಣಿಗೆ ನನ್ನ ಮೊದಲ ಆದ್ಯತೆಯಾಗಿದೆ ಎಂದು ಎಚ್‌ಕೆಇ ಸಂಸ್ಥೆ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶೀಲ್ ನಮೋಶಿ ತಿಳಿಸಿದರು.

ಈಗಾಗಲೇ ಸದಸ್ಯತ್ವ ಪಡೆದ ಕುಟುಂಬಗಳಿಗೆ ಹೊಸ ಸದಸ್ಯತ್ವ ನೀಡಲಾಗುವುದು. ಆರೋಗ್ಯ ವಿಮೆ, ನರ್ಸಿಂಗ್ ಸೇವೆ ಹೀಗೆ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಮೋಶಿ ಪೆನಲ್ ನ 9 ಗ್ಯಾರಂಟಿಗಳು: ಎಚ್‌ಕೆಇ ಸೊಸೈಟಿಯ ಬೋಧಕ ಸಿಬ್ಬಂದಿ ವರ್ಗಕ್ಕೆ 7ನೇ ವೇತನ ಆಯೋಗದ ಏಕರೂಪದ ವೇತನ ನೀಡಲು ಬದ್ಧ, ಅಧ್ಯಕ್ಷರಾಗಿ ಮೂರು ತಿಂಗಳೊಳಗಾಗಿ ಜಾರಿಗೆ ತರುತ್ತೇನೆ. ಬೋಧಕೇತರ ಸಿಬ್ಬಂದಿ ವರ್ಗದ ವೇತನ ಶ್ರೇಣಿ ಹೆಚ್ಚಳ, ಹೊಸ ಸದಸ್ಯತ್ವ ಅಭಿಯಾನ, ಸಂಸ್ಥೆಯ ಸರ್ವ ಸದಸ್ಯರಿಗೆ ಆರೋಗ್ಯ ವಿಮೆ, ಬಸವೇಶ್ವರ ಮತ್ತು ಸಂಗಮೇಶ್ವರ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸಾ ಸೌಲಭ್ಯ, ಎಲ್ಲ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ, ಕ್ರೀಡಾ ಮೈದಾನ ಒಳಗೊಂಡ ಸುಸಜ್ಜಿತ ಹಾಸ್ಟೆಲ್ ನಿರ್ಮಾಣ, ಮಾನವ ಸಂಪನ್ಮೂಲ ಬಳಕೆ, ಎಚ್‌ಕೆಇ ಸೊಸೈಟಿಯ ಅಭಿವೃದ್ಧಿ ಕಾಮಗಾರಿಗಳು, ಇತರೆ ಆರೋಗ್ಯ ಸಂಬಂಧಿ ಕಾರ್ಯಚಟುವಟಿಕೆಗಳಲ್ಲಿ ವ್ಯವಹಾರದಲ್ಲಿ ಭಾಗಯಾಗದಂತೆ ಎಚ್ಚರವಹಿಸುವೆ ಎಂದು ಗ್ಯಾರಂಟಿಗಳ ವಿವರಣೆ ನೀಡಿದರು.

ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ರಾಜಾ ಭೀಮಳ್ಳಿ, ಆಡಳಿತ ಮಂಡಳಿ ಸದಸ್ಯ ಅಭ್ಯರ್ಥಿಗಳಾದ ಡಾ.ಶರಣಬಸಪ್ಪ ಹರವಾಳ, ಅರುಣಕುಮಾರ ಎಂ.ವೈ. ಪಾಟೀಲ್, ವಿಜಯಕುಮಾರ ದೇಶಮುಖ, ಶಿವಶರಣಪ್ಪ ಸೀರಿ, ಉದಯಕುಮಾರ ಚಿಂಚೋಳಿ, ಡಾ.ಕೈಲಾಸ ಬಿ.ಜಿ.ಪಾಟೀಲ್, ಡಾ.ರಾಜೇಶ ಎಸ್. ವಾಲಿ, ನಾಗರಾಜ್ ನಿಗ್ಗುಡಗಿ, ಮಹಾದೇವ ಖೇಣಿ, ಮಂಜುನಾಥ ಹೂಲಿ ಇತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago