ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಒಂದು ಸಂಸ್ಥೆ, ಒಂದು ಸಿಬ್ಬಂದಿ, ಒಂದು ವೇತನ ಯೋಜನೆ ಜಾರಿ ತರುವುದಾಗಿ ಡಾ. ಶರಣಬಸಪ್ಪ ಕಾಮರೆಡ್ಡಿ ಅವರ ಪ್ಯಾನೆಲ್‌ನ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಡಾ. ಶರಣಬಸಪ್ಪ ಕಾಮರೆಡ್ಡಿ ತಿಳಿಸಿದರು.
ತಾವು ಹೆಚ್‌ಕೆಇ ಸೊಸೈಟಿಗೆ ಎರಡು ಬಾರಿ ಆಡಳಿತ ಮಂಡಳಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ನಿರೀಕ್ಷಿತ ಪ್ರಮಾಣದಲ್ಲಿ ಸಂಸ್ಥೆಯು ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧಿಸದೆ, ತಮ್ಮ ಅಭಿಪ್ರಾಯಕ್ಕೆ ಸೂಕ್ತ ಬೆಲೆ ಸಿಗದಿರುವಾಗ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ, ಬದಲಾವಣೆ ತರಲು ಬಯಸಿದ್ದೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಹಿಂದಿನ ಅಧ್ಯಕ್ಷರ ಆಡಳಿತ ವೈಫಲ್ಯದಿಂದ ಎಂಆರ್‌ಎಂಸಿ ಕಾಲೇಜಿನ ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಹಗರಣ ಬೆಳಕಿಗೆ ಬಂದಿದೆ. ಈ ಬಗ್ಗೆ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಬೇಕು. ಅನ್ಯಾಯವಾಗಲು ಬಿಡುವುದಿಲ್ಲ. ಒಂದು ವೇಳೆ ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಶ್ರೀ ಶರಣಬಸವೇಶ್ವರ ಮೇಲೆ ಪ್ರಮಾಣ ಮಾಡಿ ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲು ಹಿಂದೇಟು ಹಾಕುವುದಿಲ್ಲ ಎಂದು ಶಪಥ ಮಾಡಿದರು.
ಅಲ್ಲದೆ, ಹೆಚ್‌ಕೆಇ ಸೊಸೈಟಿಯಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ, ಬಸವೇಶ್ವರ ಆಸ್ಪತ್ರೆ ಮತ್ತು ಸಂಗಮೇಶ್ವರ ಆಸ್ಪತ್ರೆಯ ಉನ್ನತಿಕರಣಕ್ಕೆ ಶ್ರಮಿಸುವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್ ನಿರ್ಮಾಣ, ಆದ್ಯತೆ ಮೇರೆಗೆ ಹೊಸ ಸದಸ್ಯತ್ವ ಬಗ್ಗೆ ಚಿಂತಿಸಲಾಗಿದೆ. ಈ ಬಾರಿ ಹೊಸಮುಖಕ್ಕೆ ಮಣೆ ಹಾಕಬೇಕು ಎಂದು ಸರ್ವ ಸದಸ್ಯರಲ್ಲಿ ಮನವಿ ಮಾಡಿದರು.
ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ನಿತಿನ್ ಜವಳಿ, ಆಡಳಿತ ಮಂಡಳಿ ಸದಸ್ಯ ಅಭ್ಯರ್ಥಿಗಳಾದ ಅನಿಲಕುಮಾರ ಮರಗೋಳ, ನಾಗಣ್ಣ ಘಂಟಿ, ದೊಡ್ಡಪ್ಪ ನಿಷ್ಠಿ, ದಿನೇಶ ಅಣಕಲ್, ರವಿಕುಮಾರ ಸರಸಂಬಿ, ಡಾ. ಅಲ್ಲಮಪ್ರಭು ಆನಂದವಾಡೆ, ಡಾ. ಶಿವಾನಂದ ದೇವರಮನಿ, ಡಾ. ಸುಧಾ ಹಾಲಕಾಯಿ, ಮಲ್ಲಿಕಾರ್ಜುನ ಕಪಾಟೆ, ಶಶಿಕಾಂತ ಸೊರಡೆ, ಡಾ. ಪ್ರಶಾಂತ ಹರಸೂರ, ಶಿವಾನಂದ ಚುಕ್ಕಿ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…