ಕಲಬುರಗಿ: ಜಿಲ್ಲಾ ಆಸ್ಪತ್ರೆಯಲ್ಲಿ ಡೈಲಾಸಸ್ ಮಷೀನ್ ಸ್ಥಗಿತದಿಂದ ಮತ್ತು ಅವಧಿ ಮುಗಿದಿರುವ ಇಂಜಕ್ಷನ್ ಮತ್ತು ಮಾತ್ರೆಗಳು ಕೊಟ್ಟಿರುವುದರಿಂದ ಶಹಾಬಾದ ಗ್ರಾಮದ ನಿವಾಸಿ ಓರ್ವನ ಸಾವು ಖಂಡಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಸಂಘದ ಮುಖಂಡ ಶಿವಲಿಂಗ ಹಳಿಮನಿ ಮಾತನಾಡಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಶಹಾಬಾದ ಗ್ರಾಮದ ಆಕಾಶ ಸಾವಪ್ಪಿದ್ದು, ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 4 ಜನರ ಸ್ಥಿತಿ ಕೂಡ ಚಿಂತಜನಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವಜಾಗೋಳಿಸಿ ಇತರ ರೋಗಿಗಳ ಪ್ರಾಣ ರಕ್ಷಿಸಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧಕ್ಷ ಸಂದೀಪ್ ಪಿ ಭರಣಿ ಸೇರಿದಂತೆ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…