ಬಿಸಿ ಬಿಸಿ ಸುದ್ದಿ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಆರ್ಜಿ ಆಹ್ವಾನ

ಬೆಂಗಳೂರು; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ ಎಸ್ ಪಿ) ಮೂಲಕ ಅರ್ಜಿಯನ್ನು ಮೇ 31 ರೊಳಗೆ ಸಲ್ಲಿಸುವುದು. 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ನೀಡಲು ಅನುಕೂಲವಾಗುವಂತೆ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಕಾರ್ಮಿಕರು https://kbocwwb.karnataka.gov.in/ ಲಿಂಕ್ ಅನ್ನು ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ Already Existing Seva Sindhu Construction Worker / E-Karmika Construction Worker ಟ್ಯಾಬ್‍ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಸಂಖ್ಯೆಯನ್ನು ಲಿಂಕ್ (ಸೀಡ್) ಮಾಡತಕ್ಕದ್ದು.

ಮಂಡಳಿಯಿಂದ ಶೈಕ್ಷಣಿಕ ಸಹಾಯವನ್ನು ಪಡೆಯಲು ಇದು ಆತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಜೂನ್ 30 ರೊಳಗಾಗಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದಾಗಿದೆ.

ಎಲ್ಲಾ ನೋಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ NPCI (National Payments Corporation of India)  ಮ್ಯಾಪಿಂಗ್ ಮಾಡಿಸತಕ್ಕದ್ದು. ಆಧಾರ್ ಸೀಡ್ ಹಾಗೂ ಎನ್‍ಪಿಸಿಐ ಮಾಡಿಸದೇ ಇರುವ ಕಾರ್ಮಿಕರಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ಕಡ್ಡಾಯವಾಗಿ ಸೀಡಿಂಗ್ ಮಾಡಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

6 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

24 hours ago