ಬಿಸಿ ಬಿಸಿ ಸುದ್ದಿ

ನಿಸರ್ಗ ಫ್ಯಾಮಿಲಿ ಹೋಮ್ಸ್ ವತಿಯಿಂದ ಮಹಿಳಾ ದಿನಾಚರಣೆ

ಕಲಬುರಗಿ: ಮಹಿಳೆಯರು ಇಂದು ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕøತಿಕ, ಕ್ರೀಡೆ ಸೇರಿದಂತೆ ಎಲ್ಲ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಹೀಗಾಗಿ ಮಹಿಳೆ ಅಬಲೆಯಲ್ಲ. ಆಕೆ ಸಬಲೆ ಎಂದು ನಿಸರ್ಗ ಫ್ಯಾಮಿಲಿ ಹೋಮ್ಸ್‍ನ ಸೇಲ್ಸ್ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥ ಮಹಾಂತೇಶ ನವಲಕಲ್ ಅಭಿಪ್ರಾಯಪಟ್ಟರು.

ಮಹಿಳಾ ದಿನಾಚರಣೆ ಅಂಗವಾಗಿ ನಿಸರ್ಗ ಫ್ಯಾಮಿಲಿ ಹೋಮ್ಸ್ ವತಿಯಿಂದ ನಗರದ ಪ್ರೌಢದೇವರಾಯ ಪಿಯುಸಿ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ನುಲಿಯ ಚಂದಯ್ಯ ಎಂಬ ಶರಣನ ಕೊಳಲ್ಲಿದ್ದ ಲಿಂಗ ಕೆಳಗೆ ಬೀಳುತ್ತದೆ. ನನ್ನನ್ನು ಧರಿಸು ಎಂದು ಇಷ್ಟಲಿಂಗವೇ ಬೆನ್ನು ಹತ್ತಿದರೂ ಕಾಯಕಕ್ಕೆ ತಡವಾಗುತ್ತದೆ ಎಂದು ಮುಂದೆ ಹೊರಟರು ಎಂಬ ಘಟನೆಯನ್ನು ವಿವರಿಸಿ ಶರಣರು ಸ್ತ್ರೀ ಸಮಾನತೆ ತಂದು ಕೊಟ್ಟರಲ್ಲದೆ ಕಾಯಕಕ್ಕೂ ಮಹತ್ವ ನೀಡಿದ್ದರು ಎಂದು ತಿಳಿಸಿದರು.

ನಿಸರ್ಗ ಫ್ಯಾಮಿಲಿ ಹೋಮ್ಸ್‍ನ ಕಾನೂನು ಮುಖ್ಯಸ್ಥ ಸಂತೋಷ ವಿರಾದಾರ ಮಾತನಾಡಿ, ಮಹಿಳೆಯರಿಊ ಸಮಾನ ಸ್ಥಾನಮಾನ ಸಿಗಬೇಕು ಎಂಬುದು ಮಹಿಳಾ ದಿನಾಚರಣೆಯ ಉದ್ದೇಶವಾಗಿದ್ದು, ಆ ದಿಸೆಯಲ್ಲಿ ಮಾ. 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ ಎಂದು ಆಚರಣೆಯ ಮಹತ್ವ ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಬಸವರಾಜ ಗಾಣೂರೆ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರ ಸೇರ್ಪಡೆಯನ್ನು, ಒಳಗೊಳ್ಳುವಿಕೆಯನ್ನು ಪ್ರೇರೇಪಿಸಿದಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

ಇದೇವೇಳೆಯಲ್ಲಿ 13 ಜನ ಮಹಿಳೆಯರನ್ನು ನಿಸರ್ಗ ಫ್ಯಾಮಿಲಿ ಹೋಮ್ಸ್ ವತಿಯಿಂದ ಸನ್ಮಾನಿಸಲಾಯಿತು. ಮಾರ್ಕೆಟಿಂಗ್ ವಿಭಾಗದ ಸಾಗರ ಹಾಲಕಾಯಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು.

ಕೇವಲ ವ್ಯವಹಾರ ಮುಖ್ಯವಲ್ಲ. ಅದರ ಜೊತೆಗೆ ಸಾಮಾಜಿಕ ಕಾಳಜಿ ಹಾಗೂ ಬದ್ಧತೆ ಮುಖ್ಯ ಎಂಬುದನ್ನು ಮನಗಂಡು ಸಂಸ್ಥೆ ವತಿಯಿಂದ ಆಗಾಗ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದಕ್ಕೆ ನಿಸರ್ಗ ಫ್ಯಾಮಿಲಿ ಹೋಮ್ಸ್‍ನ ನಿರ್ದೇಶಕರುಗಳ ಪ್ರೇರಣೆಯೇ ಕಾರಣವಾಗಿದೆ. -ಮಹಾಂತೇಶ ನವಲಕಲ್, ಸೇಲ್ಸ್ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥ, ಕಲಬುರಗಿ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago