ಕಲಬುರಗಿ: ದೇಶಕ್ಕಿಂತ ದೊಡ್ಡದು ಯಾವುದು ಇಲ್ಲ. ದೇಶ ಉಳಿದರೆ ಮಾತ್ರ ದೇಶವಾಸಿಗಳು ಬದುಕಲು ಸಾಧ್ಯ. ದೇಶಕ್ಕೆ ಕಷ್ಟ, ಗಂಡಾಂತರ ಪರಿಸ್ಥಿತಿ ಬಂದಾಗ ಕೇವಲ ಸೈನಿಕರು ಮಾತ್ರ ಸೇವೆ ಸಲ್ಲಿಸಿದರೆ ಸಾಲದು. ಜೊತೆಗೆ ದೇಶದ ಯುವಶಕ್ತಿ ದೇಶ ಸೇವೆಯನ್ನು ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಸೇನಾ ನಿವೃತ್ತ ಕ್ಯಾಪ್ಟನ್ ಶರಣಪ್ಪ ಭೋಗಶೆಟ್ಟಿ ಯುವಕರಿಗೆ ಸಲಹೆ ನೀಡಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಸಂಜೆ ಏರ್ಪಡಿಸಿದ್ದ ‘ಹುತಾತ್ಮ ಮೇಜರ್ ಸಂದೀಪ ಉನ್ನಿಕೃಷ್ಣನ್ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ತಾಜ್ ಹೋಟೆಲ್ ಮೇಲೆ ನಡೆದ ದಾಳಿಯಲ್ಲಿ ಉಗ್ರರ ಜೊತೆ ಹೋರಾಡಿ ಉಗ್ರರನ್ನು ಸದೆಬಡೆದು, ಭಾರತೀಯರನ್ನು ರಕ್ಷಿಸಿ, ಜೀವವನ್ನು ನೀಡಿದ ಮೇಜರ್ ಸಂದೀಪ ಉನ್ನಿಕೃಷ್ಣನ್ ಅವರು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ. ಯಾವುದೇ ಒಂದು ರಾಷ್ಟ್ರದ ರಕ್ಷಣೆ, ಅಭಿವೃದ್ಧಿಯಲ್ಲಿ ಅಲ್ಲಿನ ಸೈನಿಕರ ಪಾತ್ರ ಪ್ರಮುಖವಾಗಿದೆ. ಮಳೆ-ಚಳಿ, ಹಗಲು-ರಾತ್ರಿಯೆನ್ನದೇ, ಮನೆ-ಸಂಸಾರವನ್ನು ಬಿಟ್ಟು ದೇಶದ ಗಡಿಯನ್ನು ಕಾಯುವ ಪವಿತ್ರವಾದ ಕೆಲಸ ಮಾಡುವ ಯೋಧರ ಸೇವೆ ಸನನ್ಯವಾಗಿದೆ. ದೇಶದ ಸೈನಿಕರಿಗೆ, ನಾಗರಿಕರ ಸ್ಪೂರ್ತಿ, ಪ್ರೋತ್ಸಾಹ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಆಳಂದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಹಾಂತಪ್ಪ, ಸಂಸ್ಥೆಯ ಸಿಬ್ಬಂದಿಗಳಾದ ಪ್ರಿಯಾಂಕಾ ದೋಟಿಕೊಳ್ಳ, ಸೈಯದ್ ಹಮೀದ್, ಪೂಜಾ ಜಮಾದಾರ, ಪ್ರಮುಖರಾದ ಶರಣು ಧೋತ್ರೆ, ಬೀರಣ್ಣ ಪೂಜಾರಿ, ಅಭಿಶೇಕ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ದೇಶಭಕ್ತಿಯ ಜೈಘೋಷ ಮೊಳಗಿದವು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…