ಸುರಪುರ: ಇಲ್ಲಿಯ ಸುರಪುರ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಗುತ್ತೇದಾರ ಅವರು ಶನಿವಾರದಂದು ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ತಾವು ಕುಳಿತುಕೊಳ್ಳಬೇಕಾದ ಕುರ್ಚಿಯ ಮೇಲೆ ಸುರಪುರ ಶಾಸಕರಾಗಿದ್ದ ದಿ.ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರವಿಟ್ಟು ಮಾಲಾರ್ಪಣೆಗೈದು ಪೂಜೆ ನೆರವೇರಿಸಿ ಸರಳವಾಗಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಪ್ರಕಾಶ ಗುತ್ತೇದಾರ ಅವರು ಮಾತನಾಡಿ ನೆಚ್ಚಿನ ನಾಯಕರಾಗಿದ್ದ ದಿ.ರಾಜಾ ವೆಂಕಟಪ್ಪ ನಾಯಕ ಅವರು ನನ್ನ ಮೇಲೆ ಅಪಾರ ಪ್ರೀತಿ ಹಾಗೂ ವಿಶ್ವಾಸ ಹೊಂದಿದ್ದರು ಅವರ ಬಗ್ಗೆ ನನಗೂ ಬಹಳಷ್ಟು ಅಭಿಮಾನವಿತ್ತು ಶಾಸಕರಾದ ನಂತರ ಸುರಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಸೂಚಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಇಂದು ಅವರ ಆಶೀರ್ವಾದದಿಂದ ನನಗೆ ಈ ಹುದ್ದೆ ಸಿಕ್ಕಿದೆ ಆದರೆ ಇಂದು ಅವರು ಅಗಲಿರುವುದು ನನಗೆ ವೈಯುಕ್ತಿಕವಾಗಿ ತುಂಬಾ ದು:ಖ ತಂದಿದೆ ನನಗೆ ಈ ಹುದ್ದೆ ಬರಲು ಅವರೇ ಕಾರಣರಾಗಿರುವದರಿಂದ ಅವರ ಭಾವಚಿತ್ರವನ್ನು ಕುರ್ಚಿಯ ಮೇಲೆ ಇಟ್ಟು ಅಧಿಕಾರ ವಹಿಸಿಕೊಳ್ಳುತ್ತಿದ್ದೇನೆ ಎಂದು ಅವರನ್ನು ಸ್ಮರಿಸಿಕೊಳ್ಳುತ್ತಾ ಭಾವುಕರಾಗಿ ನುಡಿದರು. ನನ್ನ ಅಧಿಕಾರ ಅವಧಿಯಲ್ಲಿ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದುಕೊಳ್ಳುತ್ತೇನೆ ಪ್ರಾಧಿಕಾರದ ಎಲ್ಲಾ ಕಾರ್ಯಗಳು ನ್ಯಾಯಯುತವಾಗಿ ನಡೆಯಲಿದ್ದು ನಗರಸಭೆಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಯಾವುದೇ ಸಮಸ್ಯೆಗಳಿದ್ದಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ಸಂತೋಷ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ, ಮುಖಂಡರುಗಳಾದ ವಿಠಲ್ ಯಾದವ್, ರಾಜಾ ವಾಸುದೇವ ನಾಯಕ, ಶಾಂತಗೌಡ ಚನ್ನಪಟ್ಟಣ, ಅಬ್ದುಲ್ ಗಫಾರ ನಗನೂರಿ,ಶೇಖ ಮಹಿಬೂಬ ಒಂಟಿ, ಅಬ್ದುಲ್ ಅಲೀಂ ಗೋಗಿ, ಸೂಗುರೇಶ ವಾರದ, ನಗರಸಭೆ ಸದಸ್ಯರಾದ ನಾಸೀರ್ ಹುಸೇನ ಕುಂಡಾಲೆ, ಜುಮ್ಮಣ್ಣ ಕೆಂಗೂರಿವೆಂಕಟರೆಡ್ಡಿ ಬೋಯಿ,ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುವರ್ಣಾ ಸಿದ್ರಾಮ ಎಲಿಗಾರ,ಸತ್ಯನಾರಾಯಣ ಗುಡಗುಂಟಿ,ಯಂಕಣ್ಣ ಕಟ್ಟಿಮನಿ, ವೆಂಕಟೇಶ ಪೋತಲಕರ ಹಾಗೂ ಪ್ರಮುಖರಾದ ರಾಜಾ ಪಾಮ ನಾಯಕ ಹಾಗೂ ರಾಜಾ ಮುಕುಂದ ನಾಯಕ ಸೇರಿದಂತೆ ಅನೇಕರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಉಪಸ್ಥಿತರಿದ್ದು ಪ್ರಕಾಶ ಗುತ್ತೇದಾರ ಅವರಿಗೆ ಶುಭ ಕೋರಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…