ಲೋಕಸಭಾ ಚುನಾವಣಾ ಕರ್ತವ್ಯ ಕುರಿತು ಅಧಿಕಾರಿಗಳಿಗೆ ತರಬೇತಿ

0
30

ಸುರಪುರ: ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ-2024ರ ಕುರಿತು ಚುನಾವಣಾ ಕರ್ತವ್ಯದ ಕುರಿತು ನಿಯೋಜನೆಗೊಂಡ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು.

ಸಭೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಭಾಗವಹಿಸಿ ಮಾತನಾಡಿ,ಇಂದು ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ ಇದ್ದು,ತಮಗೆ ವಹಿಸುವ ಜವಬ್ದಾರಿಯನ್ನು ಚಾಚೂ ತಪ್ಪದೆ ನಿರ್ವಹಿಸುವಂತೆ ತಿಳಿಸಿದರು.

Contact Your\'s Advertisement; 9902492681

ಅಲ್ಲದೆ ಇದೇ ಸಂದರ್ಭದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ನಾಲ್ಕು ಕಡೆಗಳಲ್ಲಿ ಚೆಕ್‍ಪೋಸ್ಟ್ ನಿರ್ಮಾಣ,ಫ್ಲೈಂಗ್ ಸ್ಕ್ವಾಡ್ ರಚನೆ,ನೀತಿ ಸಂಹಿತೆ ಜಾರಿ ನಂತರ ಎಲ್ಲಾ ಬ್ಯಾನರ್ ಬಂಟಿಂಗ್ಸ್ ಹಾಗೂ ಪಕ್ಷದ ಗೋಡೆ ಬರಹಗಳನ್ನು ತೆರವುಗೊಳಿಸುವ ಕುರಿತು ತಿಳಿಸಿದರು.ಅಲ್ಲದೆ ಸರಕಾರಿ ವಾಹನಗಳನ್ನು ಬೇರೆ ಬೇರೆ ಇಲಾಖೆಯವರಿಗೆ ನೀಡಿರುವಂತಹ ವಾಹನಗಳನ್ನು ವಶಕ್ಕೆ ಪಡೆದು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಸಿಲ್ದಾರ್ ಕೆ.ವಿಜಯಕುಮಾರ ಮಾತನಾಡಿ,ನೀತಿ ಸಂಹಿತೆ ಜಾರಿ ನಂತರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಜಾಗೃತಿವಹಿಸಬೇಕು,ಯಾವುದೇ ರೀತಿಯ ಕರ್ತವ್ಯ ಲೋಪವಾದಲ್ಲಿ ಅದಕ್ಕೆ ನೇರವಾಗಿ ತಾವೆ ಹೊಣೆಗಾರರಾಗುತ್ತೀರಿ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಓ ಬಸವರಾಜ ಸಜ್ಜನ್ ಸೇರಿದಂತೆ ವಿವಿಧ ಇಲಾಖೆಯ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here