ಬಿಸಿ ಬಿಸಿ ಸುದ್ದಿ

ಜೀವದ ಉಳಿವಿಗೆ ಪ್ರಥಮ ಚಿಕಿತ್ಸೆ ಅಗತ್ಯ: ಡಾ.ಸಂಜೀವಕುಮಾರ ಪಾಟೀಲ

ಕಲಬುರಗಿ: ಯಾವುದೇ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರಗೆ ತೆರಳುವುದಕ್ಕಿಂತ ಮುಂಚಿತವಾಗಿ, ಮನೆ ಅಥವಾ ಅಫಘಾತವಾದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪ್ರಥಮ ಚಿಕಿತ್ಸೆ ನೀಡಬೇಕು. ಇದು ವೈದ್ಯರೆ ಮಾಡಬೇಕೆಂಬುದು ಇಲ್ಲ. ನಿಮ್ಮ ಮನೆ, ಸ್ಥಳದಲ್ಲಿರುವ ಜೊತೆಗಾರರು ನೆರವೇರಿಸಬೇಕು. ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಜೀವಕ್ಕೆ ಆಪತ್ತಿರುವುದರಿಂದ, ಪ್ರಥಮ ಚಿಕಿತ್ಸೆ ತುಂಬಾ ಅಗತ್ಯವಾಗಿದೆಯೆಂದು ಖ್ಯಾತ ಕುಟುಂಬ ವೈದ್ಯ ಡಾ.ಸಂಜೀವಕುಮಾರ ಪಾಟೀಲ ಹೇಳಿದರು.

ಅವರು ನಗರದ ಆಳಂದ ರಸ್ತೆಯ, ಖಾದ್ರಿ ಚೌಕ್‌ನಲ್ಲಿರುವ ’ಶ್ರೀ ಶರಣ ಕ್ಲಿನಿಕ್’ನಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ’ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸೆ ದಿನಾಚರಣೆ’ಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಅಫಘಾತ ಸಂಭವಿಸಿದಾಗ, ಗಾಯವಾದ ಭಾಗವನ್ನು ಸ್ವಚ್ಛಗೊಳಿಸಿ ರಕ್ತ ಸೋರಿಕೆಯಾಗದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ಜ್ವರಕ್ಕೆ ತಣ್ಣನೆ ಬಟ್ಟೆಯಿಂದ ಮೈಯೆಲ್ಲಾ ಒರೆಸುವುದು, ವಾಂತಿ-ಬೇಧಿಗೆ ಸಕ್ಕರೆ ಪಾನಕ ನೀರನ್ನು ಕುಡಿಸುವುದು, ಹೃದಯಘಾತ ಸಂಭವಿಸುವ ಲಕ್ಷಣ ಕಂಡುಬಂದರೆ ಅದೇ ಸ್ಥಳದಲ್ಲಿ ಸ್ಥಿರವಾಗಿ ಕುಳಿತುಕೊಳ್ಳುವುದು, ಮೋರ್ಛೆ ರೋಗ ಉಂಟಾದರೆ ತಕ್ಷಣ ಬಲಬದಿಯಲ್ಲಿ ಮಲಗಿಸಬೇಕು ಮತ್ತು ಕೈ-ಕಾಲು ಚಲಿಸದಂತೆ ನೋಡಿಕೊಳ್ಳವುದು, ಚೇಳು ಮತ್ತು ಹಾವಿನಂತಹ ವಿಷಪೂರಿತ ಜೀವಿಗಳು ಕಡಿದರೆ, ತಕ್ಷಣವೇ ಆ ಸ್ಥಳವನ್ನು ಬ್ಲೇಡ್‌ನಿಂದ ಪ್ಲಸ್ ಆಕಾರಲ್ಲಿ ಕತ್ತರಿಸಿ, ವಿಷಪೂರಿತ ರಕ್ತವನ್ನು ಹೊರಹಾಕಬೇಕು ಮತ್ತು ಕಡಿದ ಸ್ಥಳದ ಮೇಲ್ಭಾಗದಲ್ಲಿ ಬಟ್ಟೆಯಿಂದ ಕಟ್ಟಬೇಕು. ಇದರಿಂದ ವಿಷ ಮೈತುಂಬಾ ಹರಡುವುದಿಲ್ಲವೆಂದು ಸೇರಿದಂತೆ ಅಪಘಾತ, ಅನೇಕ ಕಾಯಿಲೆಗಳಿಗೆ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ವಿವರ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಎಚ್.ಬಿ.ಪಾಟೀಲ, ಆಸ್ಪತ್ರಗೆ ತೆರಳಿಯೇ ಚಿಕಿತ್ಸೆ ಪಡೆಯುತ್ತೇವೆಂಬ ಮನೋಭಾವನೆ ಜೀವಕ್ಕೆ ತೊಂದರೆ ಮಾಡುತ್ತದೆ. ಮುಂಚಿತವಾಗಿ ಪ್ರಥಮ ಚಿಕಿತ್ಸೆ ಮಾಡಿ, ನಂತರ ಆಸ್ಪತ್ರೆಗೆ ತೆರಳಿದರೆ ರೋಗಿಗೆ ಆತ್ಮವಿಶ್ವಾಸ ಬರುವುದರ ಜೊತೆಗೆ, ವೈದ್ಯರಿಗೂ ಕೂಡಾ ಚಿಕಿತ್ಸೆ ನೀಡಲು ಅನಕೂಲವಾಗುತ್ತದೆ. ಅನೇಕ ಪ್ರದೇಶಗಳಲ್ಲಿ ಸಮೀಪದಲ್ಲಿ ಆಸ್ಪತ್ರೆ ಇಲ್ಲದಿರುವ ಸ್ಥಿತಿಯಲ್ಲಿ ಇದು ಜೀವದ ರಕ್ಷಕನಾಗಿ ಕಾರ್ಯನಿರ್ವಹಿಸುತ್ತದೆ. ವಿವಿಧ ಕಾಯಿಲೆ, ಸಂದರ್ಭಗಳಲ್ಲಿ ಮಾಡಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ಎಲ್ಲೆಡೆ ವ್ಯಾಪಕವಾದ ಜನಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆಯೆಂದು ನುಡಿದರು.

ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ.ಆಶಾ ಎಸ್.ಪಾಟೀಲ, ಆರೋಗ್ಯ ಶಿಕ್ಷಣಾಧಿಕಾರಿ ಸೂರ್ಯಕಾಂತ ಸಾವಳಗಿ, ಪ್ರಮುಖರಾದ ಅಮರ ಬಂಗರಗಿ, ಅಣ್ಣಾರಾವ ಮಂಗಾಣೆ, ವೀರೇಶ ಬೋಳಶೆಟ್ಟಿ, ಮಹಾದೇವ ಅಷ್ಟಗಿ, ವಿಜಯಕುಮಾರ ಹಡಪದ, ಶ್ರೀಕಾಂತ ಮಡಿವಾಳ, ಹಣಮಂತ ಚುಂಚೂರೆ ಸೇರಿದಂತೆ ಹಲವರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago