ಬಿಸಿ ಬಿಸಿ ಸುದ್ದಿ

ಕಕ ಭಾಗದ ಸಾಹಿತಿಗಳು, ಯುವ ಲೇಖಕರಿಗೆ ಪ್ರೋತ್ಸಾಹಿಸುವ ಕಾರ್ಯ ಮಾಡುವೆ

ಕಲಬುರಗಿ: ನಮ್ಮ ಕಕ ಭಾಗದಲ್ಲಿ ಅನೇಕ ಜನ ಪ್ರತಿಭಾವಂತ ಸಾಹಿತಿಗಳು, ಯುವ ಲೇಖಕರು ಎಲೆಮರೆ ಕಾಯಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಗುರುತಿಸಿ, ಅವರ ಬರವಣಿಗೆ, ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡುವ ಕಾರ್ಯ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ನೂತನ ಸದಸ್ಯ ಬಿ.ಎಚ್.ನಿರಗುಡಿ ಹೇಳಿದರು.

ನಗರದ ಸತ್ಯಂ ಪಿಯು ಕಾಲೇಜಿನ ಆವರಣದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾದ ಪ್ರಯುಕ್ತ ತಮಗೆ ಭಾನುವಾರ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಸಾಹಿತಿಗಳು, ವಿಶೇಷವಾಗಿ ಯುವ ಲೇಖಕರ ಬರಹಕ್ಕೆ ಪ್ರೋತ್ಸಾಹ ನೀಡಿದ್ದರೆ, ಅವರಿಂದ ಹೆಚ್ಚಿನ ಕೃತಿಗಳು ಹೊರಬರಲು ಸಾಧ್ಯವಾಗುತ್ತದೆ. ನಮ್ಮ ಪ್ರಾಧಿಕಾರದ ಮೂಲಕ ಅಧ್ಯಕ್ಷರ ನೇತೃತ್ವದಲ್ಲಿ ರಾಜ್ಯದಲ್ಲಿ ಒಂದು ಒಳ್ಳೆಯ ಸಾಹಿತ್ಯಿಕ ವಾತಾವರಣ ವೃದ್ಧಿಸಲು ಪೂರಕವಾಗಿ ನಿರಂತರವಾಗಿ ಕೆಲಸ ಮಾಡುತ್ತೇನೆ. ಇದಕ್ಕೆ ಸಾಹಿತಿಗಳು, ಬುದ್ದಿಜೀವಿಗಳು, ಲೇಖಕರ ಸಹಕಾರ ಅಗತ್ಯವಾಗಿದೆ. ನನಗೆ ದೊರೆತ ಹುದ್ದೆಯ ಗೌರವ ನನ್ನ ಜನ್ಮಭೂಮಿ ಆಳಂದ ತಾಲೂಕು, ಕಾಯಕಭೂಮಿ ಕಲಬುರಗಿ ಜಿಲ್ಲೆಗೆ ಸಮರ್ಪಿಸುತ್ತೇನೆ ಎಂದು ನುಡಿದರು.

ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ಬಿ.ಎಚ್.ನಿರಗುಡಿ ಕನ್ನಡ ಉಪನ್ಯಾಸಕರು, ಲೇಖಕರಾಗಿ 25ಕ್ಕಿಂತ ಹೆಚ್ಚಿನ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಅನೇಕ ಪ್ರಶಸ್ತಿ-ಗೌರವಕ್ಕೆ ಪಾತ್ರರಾಗಿರುವ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಖುದ್ದಾಗಿ ಭೇಟಿ ಮಾಡಿ, ಅವರ ಜೀವನ ಚರಿತ್ರೆಯನ್ನು ಬರೆದಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕನ್ನಡಪರ ಸೇವೆಯಲ್ಲಿ ತೊಡಗಿರುವ ಅವರನ್ನು ಗುರುತಿಸಿ, ಪುಸ್ತಕ ಪ್ರಾಧಿಕಾರದ ಸದಸ್ಯರನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ ನೀಡಿದ ಗೌರವವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ, ಬಳಗದ ಸದಸ್ಯರಾದ ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಅಮರನಾಥ ಶಿವಮೂರ್ತಿ, ಪ್ರಮುಖರಾದ ಪಂಚಾಕ್ಷರಿ ಪೂಜಾರಿ, ಬಸವರಾಜ ಕೊಡಚಿ, ಬಸಲಿಂಗಮ್ಮ ಪೂಜಾರಿ, ಅಂಬಾರಾಯ ಕೋನೆ ಸೇರಿದಂತೆ ಮತ್ತಿತರರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago