ಬಿಸಿ ಬಿಸಿ ಸುದ್ದಿ

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ ಸಾವಿರಾರು ಜನ ಭಾಗಿ

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ಕಾವೇರಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಾಥಾನ್

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ನಗರದ ಕಾವೇರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್‍ನಲ್ಲಿ ಸಾವಿರಾರು ಹೆಣ್ಣುಮಕ್ಕಳು, ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿದರು.

ಮಾರತಹಳ್ಳಿಯಲ್ಲಿರುವ ಕಾವೇರಿ ಆಸ್ಪತ್ರೆಯ ಆವರಣದಲ್ಲಿ ಭಾನುವಾರ ಬೆಳಗ್ಗೆ 6:30ಕ್ಕೆ ಖ್ಯಾತ ನಟಿ ಪ್ರಣಿತ ಸುಭಾμï ಅವರು ವಾಕಾಥಾನ್, ಬೈಕ್ ರ್ಯಾಲಿ ಮತ್ತು ಬೈಸಿಕಲ್ ರ್ಯಾಲಿಗೆ ಚಾಲನೆ ನೀಡಿದರು.

ಸುಮಾರು 500 ಬೈಕುಗಳು 1200 ಸೈಕಲ್‍ಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು. ಮಾರತಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ವಾಕಾಥಾನ್ ವೇಳೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ನಟಿ ಪ್ರಣಿತ ಸುಭಾμï, ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಪ್ರಜಾಪ್ರಭುತ್ವದ ಅತಿ ದೊಡ್ಡ ಉತ್ಸವವಾಗಿರುವ ಲೋಕಸಭಾ ಚುನಾವಣೆಯಲ್ಲಿ ನಾವು ಮತದಾನ ಮಾಡುವ ಮೂಲಕ ಭಾಗವಹಿಸಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮಹಿಳಾ ದಿನಾಚರಣೆ ಸಂದರ್ಭದಲ್ಲೇ ಈ ಮತದಾನ ಜಾಗೃತಿ ಕಾಯಕ್ರಮ ಆಯೋಜಿಸಿರುವುದು ಸ್ಪೂರ್ತಿದಾಯಕ. ನಾಗರಿಕರು ತಮಗೆ ಏನು ಬೇಕು? ಏನು ಬೇಡ? ಎನ್ನುವ ಕುರಿತಾದ ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯಕ ಎಂದು ಹೇಳಿದರು.

ದೇಶದ ಐಟಿ ರಾಜಧಾನಿ ಆಗಿರುವ ಬೆಂಗಳೂರಿನಲ್ಲಿ ನಾಗರಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಪರಿಚಿತರಿಗೆ, ಸ್ನೇಹಿತರಿಗೆ ಮತದಾನ ಮಾಡುವಂತೆ ತಿಳಿಸಬೇಕು. ಪ್ರಜಾಪ್ರಭುತ್ವದ ಯಶಸ್ಸು ನಾಗರಿಕರು ಮತ ಚಲಾವಣೆಯಿಂದ ನಿರ್ಧಾರವಾಗುತ್ತದೆ ಎಂದು ಬಿಬಿಎಂಪಿ ಚುನಾವಣೆಗಳ ವಿಶೇಷ ಆಯುಕ್ತರಾದ ಡಾ. ಆರ್. ಸೇಲ್ವಮಣಿ ಹೇಳಿದರು.

ಚುನಾವಣಾ ಆಯೋಗದ ಮಾಧ್ಯಮ ಮುಖ್ಯಸ್ಥರಾದ ಜಡಿಯಪ್ಪ ಗೆದ್ಲಗಟ್ಟಿ, ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ವಿಜಯಭಾಸ್ಕರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

11 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago