ಕಲಬುರಗಿ : ಎಂದಾಗ ಅಪ್ಪು ಅಭಿಮಾನಿಗಳ ಮನದಲ್ಲಿ ಅನೇಕ ಭಾವನೆಗಳು . ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ. ಹ್ಯಾಪಿ ಬರ್ತ್‌ಡೇ ಎಂದು ಹೇಳಿದರೆ ಮಾರುತ್ತರ ನೀಡಲು ಅವರಿಲ್ಲ ಎಂಬ ನೋವು ಅಭಿಮಾನಿಗಳದ್ದು. ಅಪ್ಪು ಅಜರಾಮರ ಎನ್ನುವಂತೆ ಅಪ್ಪು ಹೆಸರಿನಲ್ಲಿ ಹುಟ್ಟುಹಬ್ಬದಂದು ನಡೆಯುವ ಸಾಮಾಜಿಕ ಕಾರ್ಯಗಳಿಗೆ ಲೆಕ್ಕವಿಲ್ಲ. ಅಪ್ಪು ಕನ್ನಡಿಗರಿಗೆ ಸ್ಪೂರ್ತಿಯ ಚಿಲುಮೆ ಎನ್ನಬಹುದು.
ತಾಲೂಕಿನ ಪಾಳಾ ಗ್ರಾಮದಲ್ಲಿ ಕನ್ನಡ ಚಿತ್ರ ರಂಗದಲ್ಲಿ ಮಿಂಚಿ ಮರೆಯಾದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 49ನೇ ಹುಟ್ಟುಹಬ್ಬದ ಸಂಭ್ರಮವನ್ನು ರಾಜ್ಯ ಸರ್ಕಾರ ಸ್ಪೂರ್ತಿಯದಿನವನ್ನಾಗಿ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಗ್ರಾಮದ ಯುವಕರ ಬಳಗದ ವತಿಯಿಂದ ಹುಟ್ಟುಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಅನ್ನದಾನ ಮಾಡುವ ಮೂಲಕ ಆಚರಿಸಲಾಯಿತು.
ಗ್ರಾಮದ ಷ. ಭ್ರಹ್ಮೀ ಶ್ರೀ ಗುರುಮೂರ್ತಿ ಶಿವಾಚಾರ್ಯ ಗುರುಗಳಿಂದ ಅಪ್ಪುವಿನ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಕೇಕ್ ಕಟ್ ಮಾಡಿಸಲಾಯಿತು.ಭಜನಾ ಮಂಡಳಿಯಿಂದ ಭಜನೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮದ ಯುವಕರು ಮುಖಂಡರು ಹಿರಿಯರು ಮಕ್ಕಳು ಸೇರಿದಂತೆ ಹಲವರು ಭಾಗಿಯಾಗಿದ್ರಿ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…