ಸುರಪುರ: ತಾಲೂಕಿನ ಒಟ್ಟು 21 ಗ್ರಾಮ ಪಂಚಾಯತಿಯ 62 ಗ್ರಾಮಗಳಲ್ಲಿ ಮುಂದಿನ ಮೇ ಮತ್ತು ಜೂನ್ ಸಮಯಕ್ಕೆ ಕುಡಿಯುವ ನೀರಿನ ಸಮಸ್ಯೆ ಬರುವ ಸಾಧ್ಯತೆ ಇದ್ದು ಅದಕ್ಕಾಗಿ ಈಗಿನಿಂದಲೇ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.
ನಗರದ ತಹಸಿಲ್ದಾರ್ ಕಚೇರಿಯಲ್ಲಿ ನಡೆದ ಟಾಸ್ಕ್ ಫೊರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಈಗಾಗಲೇ ಯಕ್ತಾಪುರ ಗ್ರಾಮ ಪಂಚಾಯತಿಯ ಏಳು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುತ್ತಿದ್ದು ಬೋರವೆಲ್ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತಿದೆ,ಇನ್ನುಳಿದಂತೆ ಸೂಗುರು ಗ್ರಾಮ ಪಂಚಾಯತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.ಇನ್ನುಳಿದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಯಾವುದೇ ಕುಡಿಯುವ ನೀರಿನ ಸಮಸ್ಯೆ ಸಧ್ಯ ಎಲ್ಲಾ ಎಂದರು.
ಅಲ್ಲದೆ ಕಕ್ಕೇರಾ ಪಟ್ಟಣದ ಮೂರು ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಲಿದ್ದು ಬಿಬಿಎಮ್‍ಪಿ ಕಡೆಯಿಂದ ಅನುದಾನ ಬಂದಿದ್ದು ಅದರಲ್ಲಿ ಒಂದು ವಾರ್ಡ್‍ಲ್ಲಿ ಬೋರವೆಲ್ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ,ಇನ್ನುಳಿದ ವಾರ್ಡ್‍ಗಳಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು ಎಂದರು.
ಅಲ್ಲದೆ ಸುರಪುರ ನಗರದ 8 ವಾರ್ಡ್‍ಗಳಲ್ಲಿ ನೀರಿನ ಸವiಸ್ಯೆ ಉಂಟಾಗುವ ಸಾಧ್ಯತೆ ಇದ್ದು ಇಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದು,ಈಗ ಸಧ್ಯೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲಾ,ಕೃಷ್ಣಾ ನದಿಗೂ 1 ಟಿಎಮ್‍ಸಿ ನೀರು ಬಿಡಲಾಗುತ್ತಿದ್ದು ಏಪ್ರಿಲ್ ತಿಂಗಳಿಗೆ ಬೇಕಾಗುವಷ್ಟು ನೀರು ಸಂಗ್ರಹ ಮಾಡಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹಣಮಂತ್ರಾಯ ಪಾಟೀಲ್,ನಗರಸಭೆ ಪ್ರಭಾರಿ ಪೌರಾಯುಕ್ತ ಶಾಂತಪ್ಪ,ಕಕ್ಕೇರಾ ಪುರಸಭೆ ಮುಖ್ಯಾಧಿಕಾರಿ ಪ್ರವೀಣ,ಸುರಪುರ ನಗರಸಭೆ ಜೆ.ಇ ಮಹೇಶ ಸೇರಿದಂತೆ ಕಂದಾಯ ಇಲಾಖೆಯ ಅಶೋಕ ಹಾಗೂ ಇತರರು ಇದ್ದರು.
ಕೆಂಭಾವಿ ಬಳಿಯಲ್ಲಿನ ಎಸ್ಕೇಪ್ ಗೇಟ್‍ಗೆ ಭೇಟಿ ನೀಡಿದ್ದು ಸ್ವಲ್ಪ ಬಿರುಕು ಕಾಣಿಸಿಕೊಂಡಿದ್ದರಿಂದ ಮರಳಿನ ಚೀಲಗಳಿಂದ ಮುಚ್ಚಲಾಗಿದೆ.ಇದರ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು,ಎಸ್ಕೆಪ್ ಗೇಟ್‍ಗಳ ಮೂಲಕ ಹತ್ತು ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ದೊರೆಯಲಿದೆ. -ಕೆ.ವಿಜಯಕುಮಾರ, ತಹಸಿಲ್ದಾರ್.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…