ಕಲಬುರಗಿ: ಬೇಸಿಗೆ ಪ್ರಾರಂಭದಲ್ಲೇ ಕಲಬುರಗಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ಜನರು ಪರದಾಡುತ್ತಿದ್ದಾರೆ.ಕೂಡಲೇ ಜಿಲ್ಲಾಡಳಿತ ಕುಡಿಯುವ ನೀರಿನ ಸರಬರಾಜು ಮಾಡಲು ಮುಂದಾಗಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲಬುರಗಿ ನಗರದ ಬಹುತೇಕ ಬಡಾವಣೆಗಳಲ್ಲಿ ಕುಡಿಯುವ ನೀರು ಸಿಗುತ್ತಿಲ್ಲ.ಕೊಳವೆ ಬಾವಿಗಳು ಬತ್ತಿ ಹೋಗಿವೆ.ನಲ್ಲಿಗಳಲ್ಲಿ ನೀರು ಸರಬರಾಜು ಆಗುತ್ತಿಲ್ಲ.ಕೆಲವು ಬಡಾವಣೆಗಳಲ್ಲಿ ಮೊದ ಮೊದಲು ವಾರಕ್ಕೋಮ್ಮೆಯಾದರೂ ನಲ್ಲಿಗಳಲ್ಲಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು.ಆದರೆ ಈಗ ಹದಿನೈದು ದಿನಕ್ಕೊಮ್ಮೆ ನೀರು ಬರುತ್ತದೆ.ಇದರಿಂದ ಜನರು ದಿನ ನಿತ್ಯ ಜೀವನದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.
ಮಾರ್ಚ್ ತಿಂಗಳ ಪ್ರಾರಂಭದಲ್ಲಿಯೇ ಈ ಸಮಸ್ಯೆ ಉಂಟಾದರೂ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಮುನ್ನೇಚ್ಚರಿಕೆ ಕ್ರಮ ಕೈಗೊಂಡಿಲ್ಲ.ಬೀಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಒಂದೆಡೆ ಈ ಸಮಸ್ಯೆ ಇದ್ದರೆ ಇನ್ನೊಂದೆಡೆ ಬೀಸಿಲಿನ ಝಳದಿಂದ ಜನರು ಕಂಗಾಲಾಗಿದ್ದಾರೆ.ಆದರೆ ಮಹಾನಗರ ಪಾಲಿಕೆ ಹೆಚ್ಚುತ್ತಿರುವ ಉಷ್ಣತೆ ಶಮನಕ್ಕೆ ರಸ್ತೆ ಮತ್ತು ಬೀದಿಗಳಲ್ಲಿ ನೀರು ಚಿಮುಕಿಸಬೇಕು.ಅಲ್ಲಲ್ಲಿ ಜನರಿಗೆ ಕುಡಿಯಲು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು.ಆದರೆ ಇವ್ಯಾವುದೂ ತಲೆ ಕೆಡಿಸಿಕೊಳ್ಳದೆ ಜಿಲ್ಲಾಡಳಿತ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಈಗಂತೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಜನರ ತೊಂದರೆ ಅಹವಾಲಿಸಲು ಪುರಸೋತ್ತಿಲ್ಲ.ಕುಡಿಯುವ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಇಲ್ಲ.ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ದೂರವಾಣಿ ಸ್ವೀಕರಿಸುತ್ತಿಲ್ಲ.ಹೆಸರಿಗೆ ಮಾತ್ರ ಹೆಲ್ಪ್ ಲೈನ್ ಸಂಖ್ಯೆಗಳು ಇವೆ.ಆದರೆ ಕಾರ್ಯರೂಪಕ್ಕೆ ಇಲ್ಲದಿರುವುದು ದು:ಖದ ವಿಷಯ ಎಂದು ವಿಷಾದಿಸಿದ್ದಾರೆ.
ಇನ್ನೂ ಎರಡು ತಿಂಗಳು ಬೇಸಿಗೆ ಇರುವುದರಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗುತ್ತದೆ.ಜನರು ರೊಚ್ಚಿಗೆದ್ದು ಬೀದಿಗಿಳಿಯುವ ಮುನ್ನ ಜಿಲ್ಲಾಡಳಿತ ಕುಡಿಯುವ ನೀರು ಸರಬರಾಜಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…