ಬಿಸಿ ಬಿಸಿ ಸುದ್ದಿ

ಪ್ರತಿ ಮನೆಗೂ ಪಕ್ಷದ ಕಾರ್ಯ ಯೋಜನೆಗಳನ್ನು ತಲುಪಿಸಬೇಕು : ಸಿ.ವಿ ಚಂದ್ರಶೇಖರ್

ಕೊಪ್ಪಳ: ಪೂರ್ವ ಮತ್ತು ಪೂರ್ಣ ಯೋಜನೆ ಎನ್ನುವ ಮಾತಿನಂತೆ ಯಾವುದೇ ಒಂದು ಕಾರ್ಯಕ್ರಮ ಅಥವಾ ಸಂಘಟನೆ ಯಶಸ್ವಿಯಾಗಬೇಕಾದರೆ ಪೂರ್ವ ಯೋಜನೆ ಬಹಳ ಮುಖ್ಯವಾಗುತ್ತದೆ ಆ ನಿಟ್ಟಿನಲ್ಲಿ ರಾಷ್ಟೀಯ ಐಕ್ಯತಾ ಅಭಿಯಾನವನ್ನು ರಾಷ್ಟ್ರ ಮಟ್ಟದಿಂದ ಬೂತ್ ಮಟ್ಟದವರೆಗೆ ತಲುಪಿಸುವ ಕಾರ್ಯ ಪ್ರತಿ ಬೂತ್ ಮಟ್ಟದಲ್ಲಿ ಆಗಬೇಕಿದೆ ಎಂದು ಬಿಜೆಪಿ ರಾಷ್ಟೀಯ ಪರಿಷತ್ ಸದಸ್ಯ ಸಿ.ವಿ ಚಂದ್ರಶೇಖರ್ ಹೇಳಿದರು.

ಅವರು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ರಾಷ್ಟ್ರೀಯ ಐಕ್ಯತಾ ಅಭಿಯಾನದ ಒಂದು ದೇಶ ಒಂದು ಸಂವಿಧಾನ 370 ಕಾರ್ಯಾಗಾರದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಆದ್ದರಿಂದ ಪಕ್ಷದ ಸಂಚಾಲಕರು ಈ ಕುರಿತು ಪ್ರತಿಯೊಬ್ಬ ಕಾರ್ಯಕರ್ತರನ್ನು ನಿಮ್ಮೊಂದಿಗೆ ಜೋಡಿಸಿಕೊಂಡು ಪ್ರತಿ ಮನೆ ಮನೆಗೂ ನಮ್ಮ ಪಕ್ಷದ ಕಾರ್ಯ ಯೋಜನೆಗಳನ್ನು ತಲುಪಿಸಬೇಕು. ಕಾಶ್ಮೀರದ 370 ರದ್ದತಿ ಕುರಿತಂತೆ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದ್ದು ಆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟೀಯ ಐಕ್ಯತಾ ಅಭಿಯಾನದ ಜಿಲ್ಲಾ ಸಹ-ಸಂಚಾಲಕ ಶರಣಪ್ಪ ಬಣ್ಣದಬಾವಿ ಹಾಗೂ ಬಿಜೆಪಿ ಮುಖಂಡರಾದ ಡಾ. ಕೆ.ಜಿ ಕುಲಕರ್ಣಿ, ರಾಘವೇಂದ್ರ ಪಾನಘಂಟಿ, ಅಪ್ಪಣ್ಣ ಪದಕಿ, ಚಂದ್ರಶೇಖರ ಕವಲೂರ, ಚಂದ್ರಶೇಖರಗೌಡ ಹಲಗೆರಿ, ರಾಜು ಬಾಕಳೆ, ಡಿ.ಮಲ್ಲಣ್ಣ, ಹೇಮಲತಾ ನಾಯಕ ಸೇರಿದಂತೆ ರಾಷ್ಟ್ರೀಯ ಐಕ್ಯತಾ ಅಭಿಯಾನದ ಕೊಪ್ಪಳ ಜಿಲ್ಲೆಯ ಎಲ್ಲಾ ಮಂಡಲಗಳ ಸಂಚಾಲಕರು, ಸಹ ಸಂಚಾಲಕರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago