ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಲ್ಲಿ ಸ್ಥಾಪಿಸಲಾಗಿರುವ ವಿಶ್ವಗುರು ಸಾಂಸ್ಕøತಿಕ ನಾಯಕ ಬಸವಣ್ಣನವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಮುಂಬರುವ ಬಸವ ಜಯಂತಿಗೆ ನೆರವೇರಿಸಲಾಗುವುದು ಎಂದು ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಡಾ:ಸುರೇಶ ಸಜ್ಜನ್ ತಿಳಿಸಿದರು.
ನಗರದಲ್ಲಿ ಈ ಕುರಿತು ಮಾತನಾಡಿ,ಕಳೆದ ವರ್ಷದ ಬಸವ ಜಯಂತಿಯಂದು ಮೂರ್ತಿ ಸ್ಥಾಪಿಸಲಾಗಿದೆ,ಆಗಲೂ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಇದ್ದಕಾರಣ ಸರಳವಾಗಿ ಕಾರ್ಯಕ್ರಮ ನಡೆಸಲಾಯಿತು.ಈಬಾರಿ ಮೂರ್ತಿ ಸ್ಥಾಪನೆಯ ಎರಡನೇ ವರ್ಷಾಚರಣೆ ಜೊತೆಗೆ ಲೋಕಾರ್ಪಣೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.ವೀರಶೈವ ಲಿಂಗಾಯತ ಸಮಿತಿ,ಬಸವೇಶ್ವರ ಪತ್ತಿನ ಸಹಕಾರ ಸಂಘ,ಅಖಿಲ ಭಾರತ ವೀರಶೈವ ಲಿಂಗಾಯ ಮಹಾಸಭಾ ಸೇರಿದಂತೆ ಯುವ ವೇದಿಕೆ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯ ಎಲ್ಲಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈಗಾಗಲೇ ಬಸವೇಶ್ವರರ ಮೂರ್ತಿ ಕೆಳ ಭಾಗದಲ್ಲಿ ಸರಕಾರ ಅಧಿಕೃತವಾಗಿ ಘೋಷಿಸಿರುವ ವಿಶ್ವಗುರು ಬಸವಣ್ಣ ಸಾಂಸ್ಕøತಿಕ ನಾಯಕ ಭಾವಚಿತ್ರ ಹಾಕಲಾಗುವದು,ಮೂರ್ತಿ ಸುತ್ತಲ ಸ್ಥಳದಲ್ಲಿ ಬಸವಣ್ಣ ಸೇರಿ ಅನೇಕ ಶರಣರು ಬರೆದ ವಚನಗಳನ್ನು ಹಾಕಲಾಗುವುದು,ಇದಕ್ಕೆಲ್ಲ ತುಂಬಾ ಸಮಯ ಬೇಕಾಗಲಿದೆ,ಈಗಾಗಲೇ ಒಂದುವರೆ ತಿಂಗಳಿಂದ ಇದರ ಕಾರ್ಯ ಕಲಬುರ್ಗಿಯಲ್ಲಿ ನಡೆಸಲಾಗಿದೆ ಎಂದು ತಿಳಿಸಿದರು.
ಮೇ 10 ರಂದು ಬಸವ ಜಯಂತಿ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ,ಧರ್ಮದ ಜನರು ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಿದರು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಹೆಚ್.ಸಿ ಪಾಟೀಲ್ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…