ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಒಂದು ತಿಂಗಳಿಂದ ಏರ್ ಕೂಲರ್‌ಗಳು ಕೆಟ್ಟಿರುವುದರಿಂದ ಸಮರ್ಪಕವಾಗಿ ಗಾಳಿಯ ವ್ಯವಸ್ಥೆ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ. ಐಸಿಯು ವಾರ್ಡ್‌ನಲ್ಲಿ ಸುಮಾರು 14 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಗಾಳಿಯ ವ್ಯವಸ್ಥೆ ಇರದ ಕಾರಣ ಐಸಿಯು ಕೋಣೆಯ ಕಿಟಕಿಗಳನ್ನು ತೆಗೆಯಲಾಗಿದೆ.
ಐಸಿಯುನಲ್ಲಿ ಎಸಿ ಇಲ್ಲದೆ ಹಗಲು–ರಾತ್ರಿ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರಣ ಬಿಸಿಲಿಗೆ ಜನ ಕಂಗೆಟ್ಟು ಹೋಗಿದ್ದು, ಐಸಿಯು ವಿಭಾಗದಲ್ಲಿ ಜಿಮ್ಸ್ ಆಡಳಿತ ಮಂಡಳಿ ಕನಿಷ್ಠ ಫ್ಯಾನ್‌ಗಳ ವ್ಯವಸ್ಥೆ ಮಾಡದೇ ಇರುವುದರಿಂದ ರೋಗಿಗಳು ಹೈರಾಣಾಗಿದ್ದಾರೆ. ಕೆಲ ರೋಗಿಯ ಸಂಬಂಧಿಕರು ಮನೆಯಿಂದಲೇ ಫ್ಯಾನ್‌ಗಳನ್ನು ತಂದು ಹಚ್ಚಿದ್ದಾರೆ ಎಂದು ಗೊತ್ತಾಗಿದೆ.
ಜಿಮ್ಸ್ ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ಸರ್ಕಾರ ರೋಗಿಗಳ ಜತೆಗೆ ಚೆಲ್ಲಾಟ ಆಡುತ್ತಿದೆ ಎಂದು ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ‘ಐಸಿಯುನಲ್ಲಿ ಎ.ಸಿ.ಗಳು ಕೆಟ್ಟು ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ತಕ್ಷಣ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೇ, 500 ಎಸಿಗಳನ್ನು ಖರೀದಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…