ಬಿಸಿ ಬಿಸಿ ಸುದ್ದಿ

ಸಂಸದ ಡಾ. ಉಮೇಶ್ ಜಾಧವ್ ಅವರಿಂದ ಬಿಜೆಪಿ ಹಿರಿಯ ಮುಖಂಡ ಸೇಡಂ, ಧಾರವಾಡ ಕರ್ ಭೇಟಿ

ಕಲಬುರಗಿ: ಲೋಕಸಭಾ ಅಭ್ಯರ್ಥಿ ಸಂಸದ ಡಾ. ಉಮೇಶ್ ಜಾಧವ್ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಮತ್ತು ಬಿಜೆಪಿ ಮುಖಂಡರರಾದ ಮಾಜಿ ಲೋಕಸಭಾ ಸದಸ್ಯ ಬಸವರಾಜ್ ಪಾಟೀಲ್ ಸೇಡಂ ಅವರನ್ನು ಭೇಟಿ ಮಾಡಿ ಚರ್ಚಿಸಿ ಮಾರ್ಗದರ್ಶನ ಪಡೆದರು.

ಪ್ರಸಕ್ತ ಚುನಾವಣೆಯಲ್ಲಿನ ಕಾರ್ಯ ಚಟುವಟಿಕೆಗಳ ಬಗ್ಗೆ ಉತ್ತಮವಾಗಿ ಕೆಲಸ ಮಾಡಿ ಭವಿಷ್ಯದ ದೊಡ್ಡ ಕನಸು ಇಟ್ಟುಕೊಂಡು ಜನಪ್ರೀತಿಗೆ ಪಾತ್ರರಾಗಿ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮತ್ತು ಸರ್ವ ಜನರ ಮನಸ್ಸು ಗೆಲ್ಲುವ ರೀತಿಯಲ್ಲಿ ಕೆಲಸ ಮಾಡಿ ಎಂದು ಸೇಡಂ ಶುಭ ಹಾರೈಸಿದರು.

ತಮ್ಮಂತಹ ಹಿರಿಯರ ಆಶೀರ್ವಾದ ಮತ್ತು ಮಾರ್ಗದರ್ಶನವೇ ನನಗೆ ಶ್ರೀರಕ್ಷೆ ಸದಾಕಾಲ ಮಾರ್ಗದರ್ಶನ ಇರಲಿ ಎಂದು ಜಾಧವ್ ಈ ಸಂದರ್ಭದಲ್ಲಿ ಹೇಳಿದರು.

ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರಾದ ದಯಾಘನ ಧಾರವಾಡಕರ್ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು.

ತಮ್ಮ ಅವಧಿಯ ಉತ್ತಮ ಕೆಲಸಗಳು ಜನತೆಗೆ ಈಗ ಮನವರಿಕೆ ಆಗಿ ಮೋದಿಯವರ ಅಭಿವೃದ್ಧಿ ಪರ ಆಡಳಿತ,ಶ್ರೀರಾಮ ಮಂದಿರ ನಿರ್ಮಾಣದಂತಹ ಐತಿಹಾಸಿಕ ಕಾರ್ಯ ಜನಮನದಲ್ಲಿ ಉಳಿದುಕೊಂಡಿದೆ.ಅದು ಬೆಂಬಲವಾಗಿ ಕೆಲಸ ಮಾಡಲಿದೆ.ತಮಗೆ ಶುಭವಾಗಲಿ ಎಂದು ದಯಾಘನ ಧಾರವಾಡಕರ್ ಶುಭ ಹಾರೈಸಿ ಬೀಳ್ಕೊಟ್ಟರು.

ತಮ್ಮಂತಹ ಹಿರಿಯ ಮುಖಂಡರ ಮಾರ್ಗದರ್ಶನದಿಂದ ಉತ್ತಮ ಕೆಲಸಗಳನ್ನು ಮಾಡಲು ಸ್ಪೂರ್ತಿ ಸಿಗುವುದಾಗಿ ಡಾ. ಉಮೇಶ್ ಜಾಧವ್ ಹೇಳಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago