ಬಿಸಿ ಬಿಸಿ ಸುದ್ದಿ

ಶ್ರೀ ಶಿವಶರಣ ಹರಳಯ್ಯ ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ ತರಲು ಸರ್ವ ಪ್ರಯತ್ನ: ಡಾ.ಉಮೇಶ ಜಾಧವ

ಕಲಬುರಗಿ: ನಗರದ ರಾಮ ಮಂದಿರ ಬಳಿ ನಿರ್ಮಿಸಲಾಗುತ್ತಿರುವ ಶ್ರೀ ಶಿವಶರಣ ಹರಳಯ್ಯ ಸಮುದಾಯ ಭವನ ಪೂರ್ಣಗೊಳ್ಳಲು ಅಗತ್ಯವಿರುವ ೨.೨೫ ಕೋಟಿ ರೂ. ಹೆಚ್ಚುವರಿ ಅನುದಾನವನ್ನು ತಾವು ಮತ್ತು ಶಾಸಕ ಬಸವರಾಜ ಮತ್ತಿಮೂಡ ಸೇರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಅನುದಾನ ತರುವ ಸರ್ವ ಪ್ರಯತ್ನ ಮಾಡುವುದಾಗಿ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಹೇಳಿದರು.

ಶನಿವಾರ ಇಲ್ಲಿನ ರಾಮ ಮಂದಿರ ಬಳಿ ಮಾನಕರ್ ಲೇಔಅನಲ್ಲಿ ಶ್ರೀ ಶಿವಶರಣ ಹರಳಯ್ಯ ಸಮಗಾರ(ಮಚಗಾರ) ಸಮಾಜದಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ತಾವು ಮತ್ತು ಶಾಸಕ ಬಸವರಾಜ ಮತ್ತಿಮೂಡ ಅವರು ಎಸ್.ಸಿ.ಪಿ./ಟಿ.ಎಸ್.ಪಿ. ಅನುಷ್ಠಾನ ಸಮಿತಿಯ ಸದಸ್ಯರಾಗಿದ್ದು, ಸೋಮವಾರ ಸಭೆ ನಡೆಯಲಿದೆ. ಹೀಗಾಗಿ ಹರಳಯ್ಯ ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು. ಸರ್ವರೊಂದಿಗೆ ಪ್ರೀತಿ, ವಿಶ್ವಾಸದಿಂದ ಬೆರೆಯುವ ಶಿವಶರಣ ಹರಳಯ್ಯ ಸಮಗಾರ ಸಮುದಾಯ ಪರಿಶಿಷ್ಠ ಜಾತಿಯಲ್ಲಿ ಅತ್ಯಂತ ಹಿಂದುಳಿದಿದೆ. ಈ ಸಮುದಾಯದ ಯುವ ನಾಯಕ ಬಸವರಾಜ ಮತ್ತಿಮೂಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿದರು. ತಮ್ಮೆಲ್ಲರ ಆಶೀರ್ವಾದದಿಂದ ಬಸವರಾಜ ಮತ್ತಿಮೂಡ ಅವರು ಭಾರಿ ಬಹುಮತದಿಂದ ಆಯ್ಕೆಯೂ ಆಗಿ ಇದೀಗ ಜನಪರ ಕೆಲಸಗಳನ್ನು ಮಾಡುವ ಮೂಲಕ ಸಮಾಜದ ಏಕೈಕ ಶಾಸಕರಾಗಿ ಅವರು ಗುರುತಿಸಿಕೊಂಡಿದ್ದಾರೆ ಎಂದರು.

ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ ಹರಳಯ್ಯ ಸಮುದಾಯ ಭವನಕ್ಕೆ ಇನ್ನು ಹೆಚ್ಚುವರಿ ಅನುದಾನ ಸರ್ಕಾರದಿಂದ ಒದಗಿಸಲು ಎಲ್ಲಾ ರೀತಿಯ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಸಮಾಜವು ಯಾವತ್ತು ನಮ್ಮ ಕುಟುಂಬಕ್ಕೆ ಬೆನ್ನೆಲುಬಾಗಿರುವುದನ್ನು ತಾವು ಮರೆಯುವುದಿಲ್ಲ ಎಂದರು.
ಕಲಬುರಗಿ ದಕ್ಷಿಣ ಶಾಸಕಿ ಖನೀಜ್ ಫಾತಿಮಾ ಮತನಾಡಿ ಪ್ರತಿಭಾವಂತ ಮಕ್ಕಳಿಗೆ ಪ್ರಶಸ್ತಿ ನೀಡುವ ಈ ಸಮಾರಂಭದಲ್ಲಿ ನಿಜಕ್ಕೂ ಅರ್ಥಪೂರ್ಣ. ಈ ಕೆಲಸವನ್ನು ಎಲ್ಲಾ ಸಮುದಾಯವರು ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮಾತನಾಡಿ ತಾನು ಶಾಸಕನಾದ ನಂತರ ಒಂದು ವರ್ಷದ ಅವಧಿಯಲ್ಲಿ ಸುಮಾರು ೨೦ ಕೋಟಿ ರೂ. ಅನುದಾನ ಶಾಲಾ-ಕಾಲೇಜು, ವಸತಿ ನಿಲಯಕ್ಕೆ ನೀಡಿದ್ದೇನೆ. ನಾನು ಹೆಚ್ಚಾಗಿ ಓದಿಲ್ಲ, ಆದರೆ ನನ್ನ ಕ್ಷೇತ್ರದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಳ್ಳಷ್ಟು ಕುಂಠಿತವಾಗಬಾರದು ಎಂಬ ಕಾಳಜಿಯಿಂದ ಉತ್ತಮ ಶಿಕ್ಷಣಕ್ಕೆ ಪೂರಕವಾದ ಮೂಲಸೌಕರ್ಯ ಕಲ್ಪಿಸುತ್ತೀದ್ದೇನೆ. ಶಿಕ್ಷಣಕ್ಕೆ ಹೆಚ್ಚಿನ ಬೆಲೆ ಇರುವುದರಿಂದ ಸಮುದಾಯದ ಎಲ್ಲಾ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ಮನವಿ ಮಾಡಿದ ಅವರು ಸಮುದಾಯ ಭವನದ ಉಳಿದ ಕಾಮಗಾರಿಗೆ ಶೀಘ್ರವೆ ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ತರಲಾಗುವುದು ಎಂದರು.

ಡಿ.ಆರ್.ಡಿ.ಓ ಹಿರಿಯ ವಿಜ್ಞಾನಿ ಡಿ.ಜಿ.ರಾವ್ ಮಾತನಾಡಿ ಸಮಾಜದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಈ ರೀತಿಯ ಪ್ರತಿಭಾ ಪುರಸ್ಕಾರ ಆಯೋಜಿಸಬೇಕು, ಇದಕ್ಕೆ ಬೇಕಾದ ಆರ್ಥಿಕ ನೆರವು ನೀಡಲು ತಾವು ಸಿದಂದು ತಿಳಿಸಿದರು. ಪ್ರತಿಭಾ ಪುರಸ್ಕಾರ ವಿತರಣೆ:- ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್./ ಪಿ.ಯುಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಸಮುದಾಯದ ಪ್ರತಿಭಾವಂತ ಮಕ್ಕಳನ್ನು ಪ್ರಶಸ್ತಿ ಪತ್ರ ಮತ್ತು ಪದಕ ನೀಡಿ ಸನ್ಮಾನಿಸಲಾಯಿತು.

ಶ್ರೀ ಶಿವಶರಣ ಹರಳಯ್ಯ ಸಮಗಾರ(ಮಚಗಾರ) ಸಮಾಜದ ಜಿಲ್ಲಾಧ್ಯಕ್ಷ ಕಾಶೀರಾಯ ಎಸ್.ನಂದೂರಕರ್ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಮಾರಂಭದಲ್ಲಿ ನಿವೃತ್ತ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಳ್ಳಪ್ಪ ಎಸ್.ಮರ್ತೂರಕರ್, ನಿವೃತ್ತ ಅಧೀಕ್ಷಕ ಅಭಿಯಂತ ಶಿವಶಂಕ್ರಪ್ಪ ಗುರಗುಂಟಿ, ಜಿಲ್ಲಾ ಪಂಚಾಯತ್ ಸದಸ್ಯ ರಾಮು ಚವ್ಹಾಣ, ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳಾದ ಸಿದ್ದಣ್ಣ ವಿ.ಭಾವಿಮನಿ, ಹಣಮಂತ ಭಾವಿಮನಿ, ಚಂದ್ರಕಾಂತ ಗೊಬ್ಬೂರಕರ್, ಮಹಾದೇವ ಮುದ್ದಡಗಿ, ಗೋಪಾಲ ತೆಗನೂರ, ಬಸವರಾಜ ಶೆಳ್ಳಗಿ, ಶಿವಶರಣಪ್ಪ ದೊಡಮನಿ, ಗುಂಡಪ್ಪ ಬೋಳೆವಾಡ ಸೇರಿದಂತೆ ಸಮಾಜದ ಮುಖಂಡರು ನೂರಾರು ಸಂಖೆಯಲ್ಲಿ ಜಿಲ್ಲೆಯ ವಿವಿಧ ಸ್ಥಳದಿಂದ ಆಗಮಿಸಿದ ಸಮುದಾಯ ಬಾಂಧವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಹೆಬ್ಬಾಳ ನಿರೂಪಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago