ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 TMC ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 TMC ನೀರು ಹರಿಸುವಂತೆ ಸಿಎಂ ಮಾರ್ಚ್ 7 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಸಿಎಂ ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ
ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ.
ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ. ಈ ನಿಟ್ಟಿನಲ್ಲಿ ಕಲಬುರಗಿ ಆರ್ ಸಿ ಅವರು ಬೆಳಗಾವಿ ಆರ್ ಸಿ ಅವರಿಗೆ ಪತ್ರ ಬರೆದಿದ್ದಾರೆ ಎಮ್ಮದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ ಪಿ.ಡಿ. ಖಾತೆಯಲ್ಲಿ ರೂ 16 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ ರೂ 127 ಕೋಟಿ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು NDRF ಅಡಿಯಲ್ಲಿ ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು.
ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…