ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರು 117ನೇಯ ಜಯಂತ್ಯೋತ್ಸವ ಪ್ರಯುಕ್ತ ಜಿಲ್ಲಾ ಜಯಂತ್ಯೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸಮಿತಿಯ ಜಿಲ್ಲಾಧ್ಯಕ್ಷರಾಗಿ ದತ್ತು ಭಾಸಗಿ, ಕಾರ್ಯಾಧ್ಯಕ್ಷರನ್ನಾಗಿ ತಿಮ್ಮೇಶ ಬಾಡಿಯಾಳ, ಪ್ರಚಾರ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಉಮೇಶ ಮಾಳಿಗೆ, ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಬಸವರಾಜ ಬಾಡಿಯಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ. ಬಾಬು ಜಗಜೀವನರಾಮ್ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಕೋರ ಕಮಿಟಿ ಅಧ್ಯಕ್ಷರಾದ ಪರಮೇಶ್ವರ ಖಾನಾಪೂರ ಹಾಗೂ ಮುಖಂಡರಾದ ಶ್ಯಾಮ ನಾಟೀಕಾರ್ ಜಂಟಿಯಾಗಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಏ.5ರಂದು ಬೆಳಿಗ್ಗೆ 10-45 ಗಂಟೆಗೆ ನಡೆಯಲಿರುವ ಬಹಿರಂಗ ಸಭೆ ಜರುಗಲಿದ್ದು ಸಭೆಯಲ್ಲಿ ರಾಜಕೀಯ ಮುಖಂಡರು, ಬುದ್ದಿಜೀವಿಗಳು, ಮಹಿಳೆಯರು, ಮಕ್ಕಳು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಡಾ. ಬಾಬು ಜಗಜೀವನರಾಮ್ ಅವರು 117ನೇ ಯ ಜಯಂತ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜರುಗಲಿವೆ. ಈಗಾಗಲೇ ನಗರದ ಸುಮಾರು 25 ತಂಡಗಳಿಂದ ಕ್ರಿಕೆಟ್, ನೃತ್ಯ, ಸಾಂಸ್ಕøತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಏ. 5ರಂದು ಮಧ್ಯಾಹ್ನ 1 ಗಂಟೆಗೆ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಬಾಬು ಜಗಜೀವನರಾಮ್ ಪುತ್ಥಳಿಯವರೆಗೂ ಮೆರಣಿಗೆ ಜರುಗಲಿದೆ ಎಂದು ತಿಳಿಸಿದರು.
ದತ್ತು ಭಾಸಗಿ ಅವರು ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧಿಕೃತ ಅಧ್ಯಕ್ಷರಾಗಿದ್ದು, ಸಮಾಜದ ಕೆಲವರು ಸಮಿತಿಗಳನ್ನು ಮಾಡಿಕೊಂಡಿದ್ದಾರೆ, ಅವರೆಲ್ಲರನ್ನು ಮುಂಬರುವ ದಿನಗಳಲ್ಲಿ ಸೇರಿಸಿ ಕೊಂಡು ಜಯಂತ್ಯೋತ್ಸವವನ್ನು ಆಚರಿಸಲಾಗುವುದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಾಗರಾಜ ಗುಂಡಗುರ್ತಿ, ಲಿಂಗರಾಜ ತಾರಫೈಲ್, ಸುಶೀಲ ಕಾಂಬಳೆ, ದತ್ತು ಭಾಸಗಿ ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…