ಪ್ರಭು ಚೌಹಾಣ್ ಆರೋಗ್ಯ ವಿಚಾರಿಸಿದ ಸಂಸದ ಡಾ.ಉಮೇಶ್ ಜಾಧವ್

0
18

ಕಲಬುರಗಿ: ಅನಾರೋಗ್ಯಕ್ಕೆ ತುತ್ತಾಗಿ ಮುಂಬೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವರು ಹಾಗೂ ಔರಾದ್ ಕ್ಷೇತ್ರದ ಶಾಸಕರಾದ ಪ್ರಭು ಚೌಹಾಣ್ ಅವರನ್ನು ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಿ ಜಾಧವ್ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.

ಮುಂಬೈನಲ್ಲಿ ತಮ್ಮ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಚೌಹಾಣ್ ಅವರನ್ನು ಭೇಟಿ ಮಾಡಿ ಶೀಘ್ರ ಚೇತರಿಕೆ ಹೊಂದಿ ಮತ್ತೆ ತಮ್ಮ ಕಾರ್ಯ ಚಟುವಟಿಕೆ ಆರಂಭಿಸಲಿ ಎಂದು ಶುಭ ಹಾರೈಸಿದರು ಹಾಗೂ ಮುಂಬರುವ ಚುನಾವಣಾ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಲಿ ಎಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಡಾ. ಉಮೇಶ್ ಜಾಧವ್ ಅವರಿಗೆ ಶಾಲು ಹಾಗೂ ಹೂಗುಚ್ಚ ನೀಡಿ ಚೌಹಾಣ್ ಅವರು ಸನ್ಮಾನಿಸಿದರು ಮುಂದಿನ ಚುನಾವಣೆಯಲ್ಲಿ ಜಾದವ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆದ್ದು ಕೇವಲ ಎಂಪಿಯಾಗುವುದಲ್ಲದೆ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಕರ್ನಾಟಕಕ್ಕೆ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಸವಕಲ್ಯಾಣದ ಶಾಸಕರಾದ ಶರಣು ಸಲಗರ್ ಜೊತೆಯಲ್ಲಿದ್ದರು. ಪ್ರಭು ಚೌಹಾಣ್ ಪೂರ್ಣ ಚೇತರಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಬೀದರ್ ಗೆ ವಾಪಸ್ ಅಗಲಿದ್ದಾರೆ. ಚುನಾವಣೆಯಲ್ಲಿ ತಮ್ಮನ್ನು ಪೂರ್ಣವಾಗಿ ತೊಡಸಿಕೊಂಡು ಸಕ್ರಿಯರಗಳಿದ್ದಾರೆ ಎಂದು ಡಾ. ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here