ಕಲಬುರಗಿ; ಲೋಕಸಭೆ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುದ್ರಣವಾಗುವ ಪ್ರತಿ ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ಮುದ್ರಕರ ಮತ್ತು ಪ್ರಕಾಶರ ಹೆಸರು ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮುದ್ರಕರಿಗೆ ಹೇಳಿದರು.
ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಪ್ರಜಾ ಪ್ರತಿನಿಧಿ ಕಾಯ್ದೆ-1951ರ ನಿಯಮ 127ಎ ಪ್ರಕಾರ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದ ಪ್ರತಿ ಕರಪತ್ರ, ಪಾಂಪ್ಲೆಟ್ಸ್, ಹ್ಯಾಂಡ್ ಬಿಲ್, ಬಂಟಿಂಗ್, ಬ್ಯಾನರ್, ಫ್ಲೆಕ್ಸ್, ಹೆದ್ದಾರಿ ಫಲಕಗಳ ಮೇಲೆ ಮುದ್ರಕರ ಮತು ಪ್ರಕಾಶರ ವಿವರ ಮತ್ತು ಮುದ್ರಣ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ. ಇದನ್ನು ಎಲ್ಲಾ ಮುದ್ರಕರು ಪಾಲಿಸುವ ಮೂಲಕ ಚುನಾವಣಾ ಆಯೋಗಕ್ಕೆ ಸಹಕಾರ ನೀಡಬೇಕು ಎಂದರು.
ಜಿಲ್ಲೆಯ ಪ್ರತಿ ಮುದ್ರಕರು ತಮ್ಮ ಬಳಿಗೆ ಮುದ್ರಣಕ್ಕೆ ಬರುವ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಂದ ಪ್ರತಿ ಚುನಾವಣಾ ಸಾಮಗ್ರಿಗೆ ಪ್ರತ್ಯೇಕವಾಗಿ ಅಪೆಂಡಿಕ್ಸ್ “ಎ” ನಲ್ಲಿ ದೃಢೀಕರಣ ಪಡೆಯಬೇಕು. ಈ ದೃಢೀಕರಣಕ್ಕೆ ಪ್ರಕಾಶಕರನ್ನು ಚೆನ್ನಾಗಿ ಬಲ್ಲ ಇಬ್ಬರು ಪ್ರತಿ ಸಹಿ ಮಾಡಬೇಕು. ಚುನಾವಣಾ ಪ್ರಚಾರ ಸಾಮಗ್ರಿ ಮುದ್ರಿಸಿದ ಮೂರು ದಿನದೊಳಗೆ ಅಪೆಂಡಿಕ್ಸ್ “ಬಿ” ನಲ್ಲಿ ಮುದ್ರಕರು ಮುದ್ರಣ ಸಾಮಗ್ರಿ ವಿವರ, ಪ್ರತಿ, ವೆಚ್ಚ ಒಳಗೊಂಡಂತೆ ಮಾಹಿತಿ ಭರ್ತಿ ಮಾಡಿ ಅದರೊಂದಿಗೆ ಪ್ರಚಾರ ಸಾಮಗ್ರಿ ಮೂರು ಪ್ರತಿ ಹಾಗೂ ಪ್ರಕಾಶಕರು ನೀಡಿರುವ ಅಪೆಂಡಿಕ್ಸ್ ‘ಎ’ ನಮೂನೆ ಲಗತ್ತಿಸಿ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಚುನಾವಣಾ ಪ್ರಚಾರ ಸಾಮಗ್ರಿ ಹೊರತಾಗಿ ಇತರೆ ಮುದ್ರಣ ಕಾರ್ಯದ ಬಗ್ಗೆ ಯಾವುದೇ ಮಾಹಿತಿ ನೀಡಬೇಕಿಲ್ಲ ಎಂದು ಡಿ.ಸಿ. ಸ್ಪಷ್ಟಪಡಿಸಿದರು.
ಜಾತಿ, ಧರ್ಮ, ಪಂಗಡ, ಭಾಷೆ, ಜನಾಂಗ ಆಧಾರದ ಮೇಲೆ ಮತ ಕೇಳುವ, ಎದುರಾಳಿಯ ವೈಯಕ್ತಿಕ ಚಾರಿತ್ರ್ಯ ಹರಣ ಮಾಡುವ, ದೇಶದ ಏಕತೆಗೆ ಧಕ್ಕೆ ತರುವ ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುದ್ರಣ ಕಾರ್ಯ ಮಾಡಬೇಕು ಎಂದರು.
ಒಂದು ವೇಳೆ ಪ್ರಜಾ ಪ್ರತಿನಿಧಿ ಕಾಯ್ದೆ-1951ರ 127ಎ ನಿಯಮ ಉಲ್ಲಂಘಿಸಿದಲ್ಲಿ 6 ತಿಂಗಳ ಶಿಕ್ಷೆ ಅಥವಾ 2,000 ರೂ. ದಂಡ ಅಥವಾ ಎರಡು ವಿಧಿಸುವ ಅವಕಾಶವಿದೆ. ಇದಲ್ಲದೆ ಇತರೆ ಕಾಯ್ದೆಯನ್ವಯ ಲೈಸೆನ್ಸ್ ವಾಪಸ್ ಪಡೆಯುವ ಅಧಿಕಾರ ಸಹ ಹೊಂದಲಾಗಿದೆ ಎಂದು ಮುದ್ರಕರಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯ ಸಂದರ್ಭದಲ್ಲಿ ಮುದ್ರಕರು ಅನುಸರಿಸಬೇಕಾದ ಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಡಿ.ಸಿ.ಎಫ್ ಸುಮಿತ್ ಪಾಟೀಲ ಸೇರಿದಂತೆ ಜಿಲ್ಲೆಯ ಮುದ್ರಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…