ಬಿಸಿ ಬಿಸಿ ಸುದ್ದಿ

ಅಬಕಾರಿ ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿದ ಜೆ.ಪಿ.ನಡ್ಡಾ ಬಂಧನಕ್ಕೆ ಜಗದೀಶ್ ವಿ ಸದಂ ಒತ್ತಾಯ

ಬೆಂಗಳೂರು: ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪಿ. ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಸಂಬಂಧಿಸಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಸದಂ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನೇಕ ಇಡಿ ದಾಳಿಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆ ಹೊರತಾಗಿಯೂ ಯಾವುದೇ ಎಎಪಿ ನಾಯಕರ ಬಳಿಯಾಗಲಿ, ಕಾರ್ಯಕರ್ತರ ಬಳಿಯಾಗಲಿ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ತಪ್ಪಿತಸ್ಥರು ಎನ್ನಲು ಅವರ ಬಳಿ ಪುರಾವೆಗಳೂ ಇಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಸುಳ್ಳಾಗಿ ಬಿಂಬಿಸಿ ಎದುರಾಳಿಯಾಗಿ ನಿಂತಿರುವ ಕೇಜ್ರಿವಾಲ್ ಅವರನ್ನು ಹತ್ತಿಕ್ಕುವ ಪ್ರಯತ್ನವನ್ನು ನರೇಂದ್ರ ಮೋದಿ ನಡೆಸುತ್ತಿದ್ದಾರೆ ಎಂದರು.

ಶರತ್ ಚಂದ್ರ ರೆಡ್ಡಿ ಅವರಿಗೆ ನವೆಂಬರ್ 9, 2022ರಂದು ಸಮನ್ಸ್ ನೀಡಲಾಯಿತು. ವಿಚಾರಣೆ ವೇಳೆ ಅವರು, ತಾವು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ ಅಥವಾ ಮಾತನಾಡಿಲ್ಲ ಮತ್ತು ಎಎಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು.

ಅದಾದ ಮರುದಿನವೇ ಇ.ಡಿ ಅವರನ್ನು ಬಂಧಿಸಿತು. ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳುವಂತೆ ಹೆದರಿಸಿತು. ಚುನಾವಣೆ ಬಾಂಡ್ ಹೆಸರಲ್ಲಿ ದೇಣಿಕೆ ಕೊಡುವಂತೆಯೂ ಬೆದರಿಸಿತು. ಈವರೆಗೂ ಜೈಲಿನಲ್ಲಿದ್ದ ರೆಡ್ಡಿ ಅವರು ಇದೀಗ ತಮ್ಮ ಹೇಳಿಕೆ ಬದಲಾಯಿಸಿಕೊಂಡರು.

ತಮ್ಮ ಫಾರ್ಮಾ ಕಂಪನಿ ಮೂಲಕ ಕೋಟಿ ಕೋಟಿ ದೇಣಿಗೆ ನೀಡಿದರು. ನಂತರ ಅಬಕಾರಿ ನೀತಿ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ ಎಂದರು. ಅವರು ಹಾಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ತಕ್ಷಣವೇ ಬೆನ್ನು ನೋವಿನ ನೆಪದಲ್ಲಿ ಅವರಿಗೆ ಜಾಮೀನು ಕೊಡಲಾಗಿದೆ. ಪ್ರಮುಖ ಆರೋಪಿಯೊಬ್ಬರಿಗೆ ಬೆನ್ನು ನೋವಿನ ಕಾರಣಕ್ಕೆ ಜಾಮೀನು ನೀಡಿದ ಬೇರೆ ಉದಾಹರಣೆ ಇದೆಯೇ? ಏನೂ ತಪ್ಪೆಸಗದ ನಮ್ಮ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿ ಇರಿಸಿಕೊಳ್ಳಲಾಗಿದೆ. ಇದು ಕುತಂತ್ರ ರಾಜಕಾರಣವಲ್ಲದೆ ಬೇರೇನು? ಎಂದು ಪ್ರಶ್ನಿಸಿದರು.

ಹೈದರಾಬಾದ್ ಮೂಲದ ಉದ್ಯಮಿ ಪಿ ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ನವೆಂಬರ್ 10, 2022 ರಂದು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇ.ಡಿ ಅವರನ್ನು ಬಂಧಿಸಿತು.

ಬಳಿಕ ನವೆಂಬರ್ 15ರಂದು ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿ 5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ನೀಡಿದೆ. ನವೆಂಬರ್ 21 ರಂದು ಅವುಗಳನ್ನು ಬಿಜೆಪಿ ನಗದಾಗಿ ಪರಿವರ್ತಿಸಿಕೊಂಡಿದೆ ಎಂದು ತಿಳಿಸಿದರು.

ಅರಬಿಂದೋ ಫಾರ್ಮಾ ಒಟ್ಟು 52 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, ಅದರಲ್ಲಿ 34.5 ಕೋಟಿ ರೂ. ಬಿಜೆಪಿ ಪಾಲಾಗಿದೆ. ಭಾರತ್ ರಾಷ್ಟ್ರ ಸಮಿತಿಗೆ 15 ಕೋಟಿ ಹಾಗೂ ತೆಲುಗು ದೇಶಂ ಪಕ್ಷಕ್ಕೆ 2.5 ಕೋಟಿ ದೇಣಿಗೆ ನೀಡಿದೆ ಎಂದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

44 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago