ಬಿಸಿ ಬಿಸಿ ಸುದ್ದಿ

ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಖಚಿತ: ಸಂಸದ ಡಾ. ಜಾಧವ್ ಭವಿಷ್ಯ

ಕಲಬುರಗಿ: ಕರ್ನಾಟಕದಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರಕಾರವು ಪತನಗೊಳ್ಳಲಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ಡಾ ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ.

ಚಿತಾಪುರದಲ್ಲಿ ಶನಿವಾರ ಮಂಡಲ ಬಿಜೆಪಿ ಪ್ರಮುಖರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅವರು ಕಾಂಗ್ರೆಸ್ ಸುಳ್ಳುಗಳನ್ನು ಹೇಳುವುದರ ಮೂಲಕ ಮತದಾರರಲ್ಲಿ ಭ್ರಮೆ ಹುಟ್ಟಿಸುತ್ತಿದೆ ಲೋಕಸಭೆಯ ಚುನಾವಣಾ ರಂಗೇರುತ್ತಿದ್ದು ಎಲ್ಲೆಡೆ ಬಿಜೆಪಿಯ ಪರ ಅಲೆ ಎದ್ದಿದೆ ಎಂದರು.

ಕಾಂಗ್ರೆಸ್ ಪಕ್ಷವು ದುಡ್ಡಿದ್ದವರಿಗೆ ಟಿಕೆಟ್ ಹಂಚಿ ಮಾಡುತ್ತಿದೆ ಇನ್ನೊಂದೆಡೆ ಪಕ್ಷದ ನಾಯಕರ ಮಕ್ಕಳನ್ನು ಮತ್ತು ಕುಟುಂಬದ ಸದಸ್ಯರನ್ನು ಅಭ್ಯರ್ಥಿಯನ್ನಾಗಿಸುತ್ತಿರುವುದು ಕಾಂಗ್ರೆಸ್ಸಿನ ವಿಪರೀತ ದೌರ್ಜನ್ಯ ನೀತಿಯಿಂದಾಗಿ ಚಿತ್ತಾಪುರ ಸೇರಿದಂತೆ ಎಲ್ಲೆಡೆ ಜನ ಬೇಸತ್ತಿದ್ದಾರೆ. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ 20,000 ಮತಗಳ ಅಂತರದ ಮುನ್ನಡೆ ಸಾಧಿಸಲು ಸಜ್ಜಾಗಬೇಕಾಗಿದೆ ಎಂದು ಜಾಧವ್ ಕರೆ ನೀಡಿದರು.

ಕಾಂಗ್ರೆಸ್ ಪಕ್ಷವು ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡದೆ ಅನ್ಯಾಯವೆಸಗಿದೆ. ದಲಿತರ ಅಭಿವೃದ್ಧಿಯ ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್ ಸರ್ಕಾರವು ದಲಿತರ ಅಭಿವೃದ್ಧಿಗಾಗಿ ಮೀಸಲಾದ 11000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗೆ ನೀಡಿ ದಲಿತರ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ದುರಿದರು.

ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ದ್ರೋಹ ಬಗೆದಿದೆ. ಅವರ ಎಳಿಗೆಯನ್ನು ಬಯಸದ ಕಾಂಗ್ರೆಸ್ ಈಗ ದಲಿತಪರ ಎಂದು ನಾಟಕವನ್ನಾಡುತ್ತಿದೆ. ಭೀಮಾ ನದಿ ತೀರದ ಜನರು ಕುಡಿಯಲು ನೀರಿಗಲ್ಲದೆ ಹಾಹಾಕಾರವೆದ್ದರೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಕಣ್ಣೆತ್ತಿಯೂ ನೋಡದಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕುಳಿತು ಆಡಳಿತ ನಡೆಸುವ ಜನಪ್ರತಿನಿಧಿಗಳು ನಮಗೆ ಯಾಕೆ ಬೇಕೆಂಬ ಪ್ರಶ್ನೆ ಉದ್ಭವಿಸಿದೆ ಎಂದು ಈ ಸಂದರ್ಭದಲ್ಲಿ ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಟೀಕಿಸಿದರು.

ಜೆಡಿಎಸ್ ಮುಖಂಡ ಶಿವಕುಮಾರ್ ನಾಟಿಕಾರ್ ಅಮರಣಾಂತ ಉಪವಾಸ ನಡೆಸಿದರೂ ಮಾನವೀಯತೆ ದೃಷ್ಟಿಯಿಂದಲಾದರೂ ಅವರನ್ನು ಮಾತನಾಡಿಸಲು ಮುಂದಾಗದ ಪ್ರಿಯಾಂಕ ಖರ್ಗೆಯವರ ಉದ್ಧಟತನ ಅತಿಯಾಗಿ ಬಿಟ್ಟಿದೆ ಎಂದರು.

ಅಭಿವೃದ್ಧಿಯು ಬಿಜೆಪಿಯಿಂದ ಮಾತ್ರ ಆಗುತ್ತಿದ್ದು 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ್ ಪ್ರೀಮಿಯರ್ ರೈಲು ಹಾಗೂ ಸಾಪ್ತಾಹಿಕ ರೈಲು, ನಿರುದ್ಯೋಗ ನಿವಾರಣೆಗಾಗಿ 10,000 ಕೋಟಿ ರೂಪಾಯಿ ವೆಚ್ಚದಲ್ಲಿ ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, ಚಿತ್ತಾಪುರ ಸೇರಿದಂತೆ 120 ಹಳ್ಳಿ- ತಾಂಡಾಗಳಿಗೆ ಶುದ್ಧ ಕುಡಿಯುವ ನೀರು, ಪೂರೈಸುವ ಜಲಜೀವನ ಮಿಷನ್ ಯೋಜನೆ ಅನುಷ್ಠಾನ ಮಾಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾದ ಶಿವರಾಜ ಪಾಟೀಲ್ ರದ್ದೇವಾಡಗಿ, ಮಾಜಿ ಸಚಿವರಾದ ಬಾಬುರಾವ್ ಚೌಹಾಣ್, ಚಿತ್ತಾಪುರ ಮಂಡಲದ ಅಧ್ಯಕ್ಷರಾದ್ ರವೀಂದ್ರ ಸಜ್ಜನಶೆಟ್ಟಿ, ಶರಣಪ್ಪ ತಲ್ವಾರ್, ಶಿವಲಿಂಗಪ್ಪ ಒಡೆದ್, ನಾಗರಾಜ್ ಹೂಗಾರ್ ರಾಜು ಕುಲಕರ್ಣಿ ಶರಣಗೌಡ ಭೀಮನಳ್ಳಿ, ಮಲ್ಲಿಕಾರ್ಜುನ್, ಮಲ್ಲಿನಾಥ ಇನಾಮ್ದಾರ್, ನಾಗರಾಜ ಮಂಗಲಗಿ, ಬಸವರಾಜ್ ಬೆಣ್ಣೂರ್, ಶಿವು ಸುಣಗಾರ, ಮಲ್ಲಿಕಾರ್ಜುನ ಪೂಜಾರಿ, ಶಂಕರ ವಕೀಲ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago