ಬಿಸಿ ಬಿಸಿ ಸುದ್ದಿ

ರೇಣುಕಾಚಾರ್ಯರು ಮನುಕುಲದ ಉದ್ಧಾರಕ್ಕಾಗಿ ಭೂಮಿಗೆ ಬಂದರು

ಸುರಪುರ: ತಾಲೂಕಿನ ಲಕ್ಷ್ಮೀಪುರ-ಬಿಜಾಸಪುರ ಮಾರ್ಗ ಮಧ್ಯದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಶ್ರೀಗಿರಿ ಮಠದಲ್ಲಿ ರೇಣುಕಾಚಾರ್ಯ ಜಯಂತಿ ಆಚರಿಸಲಾಗಿದೆ.

ಕಾರ್ಯಕ್ರಮದ ಆರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಜಯಂತಿ ಆಚರಿಸಿದರು.ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಅಧ್ಯಕ್ಷ ಸೂಗುರೇಶ ವಾರದ್,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಲಾವಿದ ಶಿವಶರಣಯ್ಯಸ್ವಾಮಿ ಬಳೂಂಡಗಿಮಠ ದಂಪತಿಗೆ ಹಾಗೂ ವರದಿಗಾರ ಕ್ಷೀರಲಿಂಗಯ್ಯ ಸ್ವಾಮಿ ಬೋನ್ಹಾಳ ಅವರಿಗೆ ಶ್ರೀಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಬಾಡಗೇರಾ ಕಡ್ಲಪ್ಪನವರ ನಿಷ್ಠಿ ವಿರಕ್ತ ಮಠದ ಪ್ರಭುಲಿಂಗ ಸ್ವಾಮಿಗಳು ಮತ್ತು ಲಕ್ಷ್ಮೀಪುರ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದ ಪೀಠಾಧಿಪತಿ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಈ ಸಂದರ್ಭದಲ್ಲಿ ಸಂದೇಶ ನೀಡಿ, ಜಗದ್ಗುರು ಶ್ರೀ ರೇಣುಕಾಚಾರ್ಯರು ಮನುಕುಲದ ಉದ್ಧಾರಕ್ಕಾಗಿ ಭೂಮಿಗೆ ಅವತರಿಸಿ ಬಂದರು.

ಜೀವಿ ಶಿವನಾಗುವ ಮಾನವ ಮಹಾದೇವನಾಗುವ ಅಂಗ ಲಿಂಗವಾಗುವ ಅದ್ಭುತ ಸಿದ್ದಾಂತವನ್ನು ಜಗತ್ತಿಗೆ ಬೋಧಿಸಿದ್ದಾರೆ ಎಂದ ಅವರು ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ಸಾರಿದ ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಜಾತಿ, ಮತ, ಪಂಥಗಳನ್ನು ಎಣಿಸದೆ ಮಾನವ ಕುಲಕ್ಕೆ ಒಳಿತನ್ನು ಬಯಸಿದ ಪರಶಿವನ ಅವತಾರಿಗಳು ಎಂದರು.

ಕಾರ್ಯಕ್ರಮದಲ್ಲಿ,ರುಕ್ಮಾಪುರದ ಗುರುಶಾಂತಮೂರ್ತಿ ಶಿವಾಚಾರ್ಯ,ನಾಗನಟಗಿಯ ಸಿದ್ದರಾಮೇಶ್ವರ ಶಿವಾಚಾರ್ಯರು,ತಾಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಸುನೀಲಕುಮಾರ ವಿ.ಪಂಚಾಂಗಮಠ,ಉಪಾಧ್ಯಕ್ಷ ಶರಣಯ್ಯಸ್ವಾಮಿ ಶ್ರೀಗಿರಿ ಮಠ,ಸಾಗರ ಪುರಾಣಿಕಮಠ,ಪ್ರ.ಕಾರ್ಯದರ್ಶಿ ಮುರುಗಯ್ಯಸ್ವಾಮಿ ತಂಬೂರಿಮಠ,ಖಜಾಂಚಿ ಮಲ್ಲಿಕಾರ್ಜುನಸ್ವಾಮಿ ಹಿರೇಮಠ,ಶರಣಬಸವ ಪುರಾಣಿಕಮಠ,ಶಿವಪುತ್ರಯ್ಯ ಹಿರೇಮಠ ಮುಷ್ಠಳ್ಳಿ,ಬಸ್ಸಯ್ಯಶಾಸ್ತ್ರಿ ದೇವತ್ಕಲ್,ಬಸ್ಸಯ್ಯಸ್ವಾಮಿ ಶ್ರೀಗಿರಿಮಠ ಲಕ್ಷ್ಮೀಪುರ, ಮಂಜುನಾಥಸ್ವಾಮಿ ಸತ್ಯಂಪೇಟೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಕ್ಷೀರಲಿಂಗಯ್ಯಸ್ವಾಮಿ ಬೋನ್ಹಾಳ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

emedialine

Recent Posts

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 seconds ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago