ಬಿಸಿ ಬಿಸಿ ಸುದ್ದಿ

ಆಯುಷ್ಮಾನ ಭಾರತ ಪಾಕ್ಷಿಕ ದಿನಾಚರಣೆಯ ಜಾಥಾಕ್ಕೆ ಚಾಲನೆ

ಕಲಬುರಗಿ: ಆಯುಷ್ಮಾನ ಭಾರತ ಯೋಜನೆ ಜಾರಿಗೊಂಡು  ಇದೇ ಸೆಪ್ಟೆಂಬರ್ 23 ರಂದು ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಒಂದು ವರ್ಷದಲ್ಲಿ ಕಲಬುರಗಿ ಜಿಲ್ಲೆಯ  1.5 ಲಕ್ಷಕ್ಕಿಂತ ಹೆಚ್ಚು ಜನರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದರು.

ಅವರು ರವಿವಾರ   ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿರುವ “ಆಯುಷ್ಮಾನ ಭಾರತ” ಪಾಕ್ಷಿಕ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು. ಆಯುಷ್ಮಾನ ಭಾರತ ಯೋಜನೆಯ ಬಗ್ಗೆ  ಜನರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 15 ರಿಂದ 30 ರವರೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಉಪ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನೋಂದಾಯಿತ ಆಸ್ಪತ್ರೆಗಳಲ್ಲಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಲಾಗುವುದು ಎಂದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಮತಕ್ಷೇತ್ರ ಶಾಸಕರಾ ದತ್ತಾತ್ರೇಯ ಪಾಟೀಲ ರೇವೂರ  ಮಾತನಾಡಿ, ಆಯುಷ್ಮಾನ ಭಾರತ ಯೋಜನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಖ್ಯವಾದ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಬಿ.ಪಿ.ಎಲ್. ಹಾಗೂ ಎ.ಪಿ.ಎಲ್. ಕಾರ್ಡ್ ಫಲಾನುಭವಿಗಳು ಹೆಲ್ತ್  ಕಾರ್ಡುಗಳನ್ನು  ಪಡೆದು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.

ಆಯುಷ್ಮಾನ ಭಾರತ ಯೋಜನೆಯಲ್ಲಿ ಹೆಚ್ಚಿನ ರೋಗಗಳಿಗೆ ಚಿಕಿತ್ಸಾ   ಸೌಲಭ್ಯಗಳಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಇದರ ಮಾಹಿತಿಯನ್ನು ಪಡೆದು ವಿವಿಧ ರೋಗಗಳ ಚಿಕಿತ್ಸೆ ಪಡೆದು ಗುಣಮುಖರಾಗಬಹುದೆಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ್ ಮಾಧವರಾವ ಕೆ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ರಾಜಕುಮಾರ ಕುಲಕರ್ಣಿ ಹಾಗೂ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago