ಕಲಬುರಗಿ: ಜಿಲ್ಲೆಯಲ್ಲಿ ಸದಾ ಒಂದಿಲ್ಲೊಂದು ಹೊಸತನದಿಂದ ಕೂಡಿದ ಕಾರ್ಯಕ್ರಮಗಳಿಂದ ಹೆಸರು ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ಮೊದಲ ಬಾರಿಗೆ ಏಪ್ರೀಲ್ನಲ್ಲಿ ಒಂದು ದಿನದ ಪ್ರಥಮ ತತ್ವಪದ ಸಾಹಿತ್ಯ ಸಮ್ಮೇಳನವೊಂದನ್ನು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಈ ಕುರಿತು ರವಿವಾರ ನಗರದ ಕನ್ನಡ ಭವನದಲ್ಲಿ ನಡೆಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತತ್ವಪದಕಾರರು ತಮ್ಮ ದಿನನಿತ್ಯ ಜೀವನದಲ್ಲಿ ಕಂಡ ಅನೇಕ ತರಹದ ನೋವು, ನಲಿವು, ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ತಮ್ಮ ಸಾಹಿತ್ಯದ ಮೂಲಕ ಹೊರಹಾಕಿದ್ದಾರೆ. ತತ್ವಪದಕಾರರ ಅನೇಕ ಚಿಂತನೆಗಳನ್ನು ಇಂದಿನ ಸಮಾಜಕ್ಕೆ ಪರಿಚಯಿಸುವ ಪ್ರಯತ್ನ ಈ ಸಮ್ಮೇಳನದ್ದಾಗಿದೆ. ಮುಂದಿನ ವಾರದಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಸಮೇಳನವನ್ನು ಅರ್ಥಪೂರ್ಣವಾಗಿಸಲು ಅನೇಕ ಹೊಸತನದ ವಿಚಾರಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ್ ಎಸ್ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾದ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಜಿ ಬಾಳಿ, ಜಗದೀಶ ಮರಪಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಡಾ. ರೆಹಮಾನ್ ಪಟೇಲ್, ವಿನೋದಕುಮಾರ ಜೇನವೇರಿ, ಶಿವಾನಂದ ಪೂಜಾರಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಶರಣಬಸಪ್ಪ ನರೂಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…