ಬಿಸಿ ಬಿಸಿ ಸುದ್ದಿ

ಪತ್ರಿಕಾ ಭವನದಲ್ಲಿ ಸಂಸದ ಡಾ. ಉಮೇಶ್ ಜಾಧವ್ ಹೋಳಿ ಹಬ್ಬ ಆಚರಣೆ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ದಿಂದ ಹಮ್ಮಿಕೊಂಡ ಹೋಳಿ ಹಬ್ಬದದಲ್ಲಿ ಸಂಸದ ಡಾ.ಉಮೇಶ ಜಾಧವ, ಶಿವರಾಜ ಪಾಟೀಲ, ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸೇರಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು, ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮದ ಬಣ್ಣದ ಹಬ್ಬವನ್ನು ಆಚರಿಸಿದರು.

ಹೋಳಿ ಹಬ್ಬ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಆಚರಿಸಲಾದ ಹೋಳಿ ಹಬ್ಬದ ಸಂಭ್ರಮದಲ್ಲಿ ಸಂಸದರ ಜೊತೆ ಕಲಬುರಗಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸೇರಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು, ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮದ ಬಣ್ಣದ ಹಬ್ಬವನ್ನು ಆಚರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ಬಗೆಯ ಬಣ್ಣಗಳನ್ನು ಒಗ್ಗೂಡಿಸುವಂತೆ ನಾವೆಲ್ಲರೂ ಒಂದು ಎಂಬುದನ್ನು ನಿರೂಪಿಸುತ್ತದೆ ಎಂದರು.

ಚಿಕ್ಕವರಿದ್ದಾಗ ಹೋಳಿ ಹಬ್ಬದ ಸಂಭ್ರವನ್ನು ಬಹಳ ಆನಂದದಿಂದ ಅನುಭವಿಸುತ್ತಿದ್ದೇವು. ಇಂದು ಪತ್ರಕರ್ತರೆಲ್ಲರ ಜತೆ ಹಬ್ಬ ಆಚರಿಸಿರುವುದು ಬಾಲ್ಯ ನೆನಪಿಸುವಂತೆ ಮಾಡಿದೆ ಎಂದು ಹೇಳಿದರು.

ಎಲ್ಲರೂ ಅದರಲ್ಲೂ ಹಿಂದೂಗಳೆಲ್ಲರೂ ಸಂಭ್ರಮದಿಂದ ಆಚರಿಸುವ ಹೋಳಿ ಹಬ್ಬದ ದಿನದಂದೇ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸ್ ಎಸ್ ಎಲ್ ಸಿ ಬೋಡ್೯ ಪರೀಕ್ಷೆ ಇಟ್ಟಿರುವುದು ಸರಿಯಲ್ಲ. ಇದು ಮುಂದಿನ ದಿನಗಳಲ್ಲಿ ಪುನರಾವರ್ತನೆಯಾಗಬಾರದು ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿದಂತೆ ಪತ್ರಕರ್ತ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago