ಕಲಬುರಗಿ: ಗಂಡು-ಹೆಣ್ಣು ಮಗುವಿನ ನಡುವೆ ತಾರತಮ್ಯ ಮಾಡಬಾರದು. ಭ್ರೂಣಲಿಂಗ ಪತ್ತೆ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣಹತ್ಯೆ ಮಾಡುವುದು ಅಮಾನವೀಯತೆಯಾಗಿದ್ದು, ಯಾರು ಕೂಡಾ ಇಂತಹ ಕೆಟ್ಟ ಕೆಲಸಕ್ಕೆ ಕೈಹಾಕುವ ಪ್ರಯತ್ನ ಬೇಡ ಡಂದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ’್ರದ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಜರುಗಿದ ‘ಅಂತಾರಾಷ್ಟ್ರೀಯ ಭ್ರೂಣಹತ್ಯೆ ವಿರೋಧಿ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯ ಸೆಕ್ಷನ್ 23ರ ಪ್ರಕಾರ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ಈ ಕೃತ್ಯದಲ್ಲಿ ಭಾಗವಹಿಸಿದ ವೈದ್ಯರು ಮತ್ತು ಗರ್ಭಿಣಿಯ ಸಂಬಂಧಿಕರು ಇಬ್ಬರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರಕೃತಿಯ ಸಮತೋಲನಕ್ಕೆ ಗಂಡು ಮತ್ತು ಹೆಣ್ಣು ಇಬ್ಬರು ಬೇಕು. ಭ್ರೂಣಹತ್ಯೆ ಎಂದಿಗೂ ಕೂಡಾ ಮಾಡಬಾರದು ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಮಾಜ ಸೇವಕರಾದ ಶಿವಯೋಗೆಪ್ಪಾ ಎಸ್.ಬಿರಾದಾರ, ಅಸ್ಲಾಂ ಶೇಖ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಜಗನ್ನಾಥ ಗುತ್ತೇದಾರ, ಗುರುರಾಜ ಕೈನೂರ, ಗಂಗಾಜ್ಯೋತಿ ಗಂಜಿ, ರೇಷ್ಮಾ ನಕ್ಕುಂದಿ, ಸಂಗಮ್ಮ ಅತನೂರ್, ಮಂಗಲಾ ಚಂದಾಪುರೆ, ಶ್ರೀದೇವಿ ಸಾಗರ, ನಾಗಮ್ಮ ಚಿಂಚೋಳಿ, ಕಿರಣ, ಸಿದ್ರಾಮ ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…