ಆಳಂದ: ತಾಲ್ಲೂಕಿನ ನಿಂಬಾಳ ಗಡಿ ಚೆಕ್ ಪೋಸ್ಟ್ ಕೇಂದ್ರಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ ಹಾಕ ಭೇಟಿ ನೀಡಿ ಗಡಿ ತಪಾಸಣೆ ಅಧಿಕಾರಿಗಳಿಗೆ ಗಡಿ ಮಾರ್ಗದಲ್ಲಿ ಹೆಚ್ಚಿನ ಕಟ್ಟೆಚ್ಚರವಹಿಸಲು ಬಿಗಿ ಕ್ರಮ ಕೈಗೊಳ್ಳಲು ತಿಳಿಸಿದ ಘಟನೆ ನಡೆಯಿತು.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೆರೆಯ ಮಹಾರಾಷ್ಟ್ರದಿಂದ ನರ ಸಂಪರ್ಕ ಕಲ್ಪಿಸುವ ಆಳಂದ ತಾಲ್ಲೂಕಿನ ನಿಂಬಾಳ, ಹಿರೋಳಿ, ಖಜೂರಿ ಮಾರ್ಗದ ಗಡಿ ಚೆಕ್ ಪೋಸ್ಟ್ ಮೇಲೆ ಅಧಿಕಾರಿಗಳು ಎಚ್ಚರವಹಿಸಬೇಕು, ರಾಜ್ಯದ ಒಳಗೆ ಹಾಗೂ ಹೊರ ಸಂಪರ್ಕಿಸುವ ವಾಹನಗಳ ತಪಾಸಣೆ ಕಟ್ಟುನಿಟ್ಟು ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.
ಚೆಕ್ ಪೋಸ್ಟ್ ಗಳಲ್ಲಿ ರೂ.೧೦ ಲಕ್ಷಕ್ಕೂ ಮೇಲ್ಪಟ್ಟ ಹಣ ದೊರೆತಲ್ಲಿ ತಕ್ಷಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು, ಮದ್ಯ ಸಾಗಾಟ, ಉಚಿತ ಉಡುಗೊರೆ, ಬಟ್ಟೆ, ಗೃಹ ಉಪಯೋಗಿ ಸಾಮಗ್ರಿಗಳ ಸಾಗಾಟದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.
ಚೆಕ್ ಪೋಸ್ಟ್ ಗಳ ಮೇಲೆ ಅಧಿಕಾರಿಗಳ ರಿಜಿಸ್ಟರ್ ಪರಿಶೀಲಿಸಿದರು, ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ನೆರಳು, ವಿದ್ಯುತ್, ಪ್ಯಾನ್ ಮತ್ತಿತರ ಸೌಲಭ್ಯಗಳ ಸಮರ್ಪಕವಾಗಿ ಕಲ್ಪಿಸಲು ತಹಶೀಲ್ದಾರ್ ಪ್ರಕಾಶ ಹೊಸಮನಿ ಅವರಿಗೆ ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯಕುಮಾರ ಹಾರ, ತಹಶೀಲ್ದಾರ್ ಪ್ರಕಾಶ ಹೊಸಮನಿ, ತಾಪಂ ಇಒ ಮಾನಪ್ಪ ಕಟ್ಟಿಮನಿ, ಎಆರ್ ಒ ಮಹಾಂತೇಶ ಮುಳಗುಂದ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಶರಣಬಸಪ್ಪ ಹಕ್ಕಿ, ಆನಂದ ಪೂಜಾರಿ, ಬಸವರಾಜ ಸಿಂಗಶೆಟ್ಟಿ, ಸಿಪಿಐ ಸಿದ್ರಾಮಯ್ಯ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…