ಕಲಬುರಗಿ; ನಗರದಲ್ಲಿ ಮಾರ್ಚ್ 30 ರಂದು ನಡೆಯಲಿರುವ 18ನೇ ಶತಮಾನದ ಸಂತ ಹಾಗೂ ಸಮಾಜ ಸುಧಾರಕ ಶರಣಬಸವೇಶ್ವರರ ಪುಣ್ಯಸ್ಮರಣೆಯ ಅಂಗವಾಗಿ ವಾರ್ಷಿಕವಾಗಿ ನಡೆಸಲಾಗುವ ಶರಣಬಸವೇಶ್ವರ ಜಾತ್ರೆ ಸಮಾನತೆ ಮತ್ತು ಕೋಮು ಸೌಹಾರ್ದತೆಯ ಪ್ರತಿಕವಾಗಿದೆ ಎಂದು ವಿವಿಧ ಸಮಾಜದ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ಪ್ರಮುಖರು ಒಗ್ಗಟ್ಟಿನಿಂದ ಶ್ಲಾಘಿಸಿದರು.
ಶರಣಬಸವೇಶ್ವರ ದೇಗುಲದ ಆವರಣದಲ್ಲಿರುವ ಶರಣ ಸಂಸ್ಥಾನದ ದಾಸೋಹ ಮಹಾಮನೆಯಲ್ಲಿ ಬುಧವಾರ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಹಾಗೂ ವಿವಿಧ ಮುಖಂಡರು ಜೊತೆಗೂಡಿ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶರಣಬಸವೇಶ್ವರರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅದ್ಧೂರಿ ಆಯೋಜನೆಗೆ ಶ್ಲಾಘಸಿ ಒಗ್ಗಟ್ಟು ವ್ಯಕ್ತಪಡಿಸಿದರು.
ಕಳೆದ 202 ವರ್ಷಗಳಿಂದ ಶರಣಬಸವೇಶ್ವರ ದೇವಸ್ಥಾನದ ಎದುರುಗಡೆ ಇರುವ ಜಾತ್ರಾ ಮೈದಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಈ ವರ್ಷದ ಹಾಗೇ ಮುಂದಿನ ವರ್ಷವೂ ಹೆಚ್ಚು ವಿಜೃಂಭಣೆಯಿಂದ ನಡೆಯಲಿದೆ ಎಂದು ಮುಖಂಡರು ತಿಳಿಸಿದರು.
ಕಲಬುರಗಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ್, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಿ ಜಿ ಸಾಗರ್, ಮಾಜಿ ಕಾಪೆರ್Çರೇಟರ್ ಹಾಗೂ ದಲಿತ ಮುಖಂಡರಾದ ಬಾಬು ಸುಂಠಾಣ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕ್‍ನೂರ, ಧಾನ್ಯಗಳು ಮತ್ತು ಬೀಜ ವ್ಯಾಪಾರಿಗಳ ಸಂಘದ ಅಧ್ಯಕ್ಷ ಶ್ರೀ ಶ್ರೀಮಂತ ಉದನೂರ ಸೇರಿದಂತೆ ವಿವಿಧ ವ್ಯಾಪಾರ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಸಮುದಾಯದ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಶಾಸಕಿ ಖನೀಜ ಫಾತಿಮಾ ಮಾತನಾಡಿ, ಶರಣಬಸವೇಶ್ವರ ಪುಣ್ಯಕ್ಷೇತ್ರ ಕೋಮು ಸೌಹಾರ್ದದ ಪ್ರತೀಕವಾಗಿದ್ದು, ಪರಸ್ಪರ ಸಹಿಷ್ಣುತೆ ಮತ್ತು ಗೌರವದ ಮೂಲಕ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವುದು ಹೇಗೆ ಎಂಬುದನ್ನು ಇತರರಿಗೆ ತೋರಿಸಿಕೊಟ್ಟಿದೆ ಎಂದರು.
ಶರಣಬಸವೇಶ್ವರರು ಮತ್ತು ಸೂಫಿ ಸಂತ ಖಾಜಾ ಬಂದಾ ನವಾಜ್ ಅವರು ಈ ಭಾಗದ ಜನತೆಗೆ ಸದಾ ಎರಡು ಕಣ್ಣುಗಳಂತಿದ್ದು, ಜನರು ಒಗ್ಗಟ್ಟಿನಿಂದ ಇರುವಂತೆ ಮಾರ್ಗದರ್ಶನ ನೀಡಿದ್ದರು ಎಂದರು.
ಖಾಜಾ ಬಂದಾ ನವಾಜ್ ದರ್ಗಾದ ಡಾ. ಸಜ್ಜಾದ ನಶೀನ್ ಅವರ ಪುತ್ರ ಹಾಗೂ ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ, ಹೈದರಾಬಾದಿನಲ್ಲಿ ಪೂರ್ವಭಾವಿಯಾಗಿ ನಿಗದಿಪಡಿಸಿದ್ದ ಕೆಲಸದ ಮೇಲಿರುವುದರಿಂದ, ಪೂಜ್ಯ ಡಾ. ಅಪ್ಪಾಜಿ ಅವರಿಗೆ ಸಂದೇಶ ರವಾನಿಸಿ, ಶರಣಬಸವೇಶ್ವರ ಜಾತ್ರೆಯ ಯಶಸ್ವಿ ಆಯೋಜನೆಗೆ ಸಂತಸ ಮತ್ತು ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾಜಿ ಅವರು ತಮ್ಮ ಭಾಷಣದಲ್ಲಿ ಒಗ್ಗಟ್ಟನ್ನು ವ್ಯಕ್ತಪಡಿಸಿದ ಮತ್ತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲಾ ಸಮುದಾಯದ ಮುಖಂಡರಿಗೆ ಹಾಗೂ ರಾಜಕೀಯ ಪ್ರಮುಖರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಡಿ.ಜಿ.ಸಾಗರ್ ಮಾತನಾಡಿ, ಶರಣಬಸವೇಶ್ವರ ಸಂಸ್ಥಾನವು ಸದಾ ಸಮಾನತೆಯ ಪ್ರತಿಪಾದಕವಾಗಿದ್ದು, ಜಾತಿ ಮತ್ತು ಕೋಮುಗಳ ಬೇಧಭಾವನೆ ಮಾಡದೇ ನಾವೆಲ್ಲರೂ ಒಂದೇ ಎಂದು ಸಂದೇಶ ನೀಡಿದ ಸಂಸ್ಥಾನವಿದು ಎಂದರು.
ಶಾಸಕರಾದ ಅಲ್ಲಮಪ್ರಭು ಪಾಟೀಲ ಹಾಗೂ ಕಮಕನೂರ, ತಮ್ಮ ಭಾಷಣದಲ್ಲಿ ಸಂಸ್ಥಾನದ ಇತಿಹಾಸ ಮತ್ತು ಜಾತ್ರಾ ಮೈದಾನದಲ್ಲಿ ಕಳೆದ 200 ವರ್ಷಗಳಿಂದ ಜಾತ್ರಾ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಿ, ಕೋವಿಡ್-19 ಸಂಕಷ್ಟದ ಸಮಯದಲ್ಲಿಯೂ ರಥೋತ್ಸವ ನಡೆಸಲಾಗಿದೆ ಎಂದು ತಿಳಿಸಿದರು.
ಸಂಸ್ಥ್ತಾನದಿಂದ ಹಸಿದ ಹೊಟ್ಟೆಗೆ ಅನ್ನ ನೀಡುವ ಅನ್ನದಾಸೋಹ ನೀಡುವುದರ ಜೊತೆಗೆ ತನ್ನ ಸರಣಿ ಶಿಕ್ಷಣ ಸಂಸ್ಥೆಗಳ ಮೂಲಕ ಜ್ಞಾನವನ್ನು ಹರಡುವ ವಿಸ್ತೃತ ಜ್ಞಾನದಾಸೋಹದ ನೀಡುವುದರ ಮೂಲಕ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ಅವರು ತಿಳಿಸಿದರು.
ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಸ್ವಾಗತಿಸಿದರು. ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುರೇಶ ನಂದಗಾಂವ್, ಶ್ರೀ ಅರುಣಕುಮಾರ ಪಾಟೀಲ, ಶ್ರೀಮಂತ ಉದನೂರ ಸೇರಿದಂತೆ ಇತರರು ಮಾತನಾಡಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ ಬಿಡವೆ ವಂದಿಸಿದರು. ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಕಿರಣ್ ಮಾಕಾ ಸೇರಿದಂತೆ ಇತರ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…