ಸುರಪುರ: ಮಹಿಳೆಯರು ಶಿಕ್ಷಣದ ಜೊತೆಗೆ ವಿಶೇಷ ತರಬೇತಿಗಳನ್ನು ಪಡೆಯುವ ಮೂಲಕ ಉದ್ಯೋಗ ನಿರ್ವಾಹಣೆಯ ಜೊತೆಗೆ ಆರ್ಥಿಕ ಪ್ರಗತಿ ಹೊಂದುತ್ತಾ ಸಬಲರಾಗಿ ಎಂದು ನ್ಯಾಯವಾದಿ ಜಯಲಲಿತಾ ಪಾಟೀಲ್ ಹೇಳಿದರು.
ನಗರದ ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಸುರಪುರ ಹಾಗೂ ಅಕ್ಕಮಹಾದೇವಿ ಮಹಿಳಾ ಸ್ವ-ಸಹಾಯ ಸಂಘ ರಂಗಂಪೇಟ ಸಹಯೋಗದೊಂದಿಗೆ ಆಯೋಜಿಸಿದ್ದ, ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಇಂದು ಸ್ಪರ್ಧೆ ಮಾಡುತ್ತಿದ್ದು, ಕುಟುಂಬದ ನಿರ್ವಾಹಣೆ ಜೊತೆಗೆ ಉದ್ಯೋಗದ ಜವಬ್ದಾರಿಕೂಡ ಅನೇಕರು ನಿರ್ವಹಿಸುತ್ತಿದ್ದಾರೆ, ಸರ್ವಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿರುವ ನಮ್ಮ ಮಹಿಳೆಯರು ತ್ಯಾಗದ ಪ್ರತಿರೂಪ, ಕರುಣೆ, ಮಮತೆ, ಪ್ರೀತಿ, ವಾತ್ಸಲ್ಯಗಳ ತವನಿಧಿಯಾಗಿದ್ದಾರೆ ಎಂದು ಹೇಳಿದರು.
ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲರಾದ ಸುವರ್ಣ ಅರ್ಜುಣಗಿ ಮಾತನಾಡಿ, ಮಹಿಳೆಯರು ವಿದ್ಯಾಭ್ಯಾಸದ ಜೊತೆಗೆ ಗೃಹ ಕೈಗಾರಿಕೆ, ಗುಡಿಕೈಗಾರಿಕೆ ಹಾಗೂ ಹೊಲಿಗೆ ತರಬೇತಿ ಸೇರಿದಂತೆ ಅನೇಕ ಕೆಲಸಗಳನ್ನು ನಿರ್ವಹಿಸಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಅತಿಥಿಗಳಾಗಿ ಮೇಘಾ ದಾಯಿಪುಲೆ, ಬಸಮ್ಮ ಅಂಗಡಿ ಗೆದ್ದಲಮರಿ, ಪ್ರಮುಖರಾದ ಶಿವಶರಣಪ್ಪ ಹೆಡಿಗಿನಾಳ, ಶರಣಯ್ಯ ಇಟಗಿ ಗೊರ್ಲೆಕೊಪ್ಪ, ಮಲ್ಲಪ್ಪ ಪೂಜಾರಿ ಮಸ್ಕಿ, ಶಿವನಗೌಡ ಬಿರಾದಾರ ಚಡಚಣ, ಶಿವಪ್ಪ ಹೆಬ್ಬಾಳ ಕೋಡೆಕಲ್ ಸೇರಿದಂತೆ ಇತರರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರುಗಳಾದ ಸೂಲಗಿತ್ತಿ ಚನ್ನಬಸಮ್ಮ ಮಲ್ಲಾ ಬಿ, ಜಯಮ್ಮ ನಂಜಲದಿನ್ನಿ, ಹನುಮವ್ವ ಬೇಡರಕಾರಲಕುಂಟಿ, ಶೋಭಾ ವಿರೂಪಾಪುರ, ಶಶಿಕಲಾ ವೀರಯ್ಯ, ನಿಂಗವ್ವ ಕಟಬಿ, ರೇಖಾ ಇಟಗಿ, ಸರೋಜಮ್ಮ ಗುನ್ನಾಳ, ಶಾಂತಮ್ಮ ಹಸಮಕಲ್, ಲಲೀತಮ್ಮ ಹಿರೇಮಠ ಇವರುಗಳಿಗೆ ಅಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು, ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಲಲೀತಮ್ಮ ಹಿರೇಮಠ ಪ್ರಾರ್ಥಿಸಿದರು, ಸಿದ್ದಪ್ರಸಾದ ಪಾಟೀಲ್ ಸ್ವಾಗತಿಸಿದರು, ಶೋಭಾ ಕೊಟ್ರಯ್ಯ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…