ಬಿಸಿ ಬಿಸಿ ಸುದ್ದಿ

ಡಾ.ಬಾಬು ಜಗಜೀವನ ರಾಮ ಜಯಂತೋತ್ಸವ ಆಚರಣೆಗೆ ಮೂಲ ಸೌಕರ್ಯ ಕಲ್ಪಿಸಲು ಮನವಿ

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಜಯಂತೋತ್ಸವ ಕಾರ್ಯಕ್ರಮವನ್ನು ಅನ್ನಪೂರ್ಣ ಕ್ರಾಸ ಹತ್ತಿರ ಇರುವ ಬಾಬು ಜಗಜೀವನ ರಾಮ್ ಪ್ರತಿಮೆ ಬಳಿ ಏ.5ರಂದು ನಡೆಸಲು ಪರವಾನಿಗೆ ನೀಡುವಂತೆ ಡಾ.ಬಾಬು ಜಗಜೀವನ ರಾಮ್ ಜಯಂತೋತ್ಸವ ಸಮಿತಿ ಅಧ್ಯಕ್ಷ ದತ್ತುಭಾಸಗಿ ಅವರು, ಮಹಾನಗರ ಪಾಲಿಕೆಯ ಆಯುಕ್ತರಿಗೆ ಪತ್ರಬರೆದು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿರುವ ಅವರು, ಏ. 5 ರಂದು ಬಹಿರಂಗ ಸಭೆ ನಡೆಸಲಾಗುವುದು, ಇದೇ ಕಾರ್ಯಕ್ರಮದಲ್ಲಿ ಎಸ್. ಎಸ್.ಎಲ್.ಸಿ.ಸೇರಿದಂತೆ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಒಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಕ್ರೀಡಾ ಕೂಟದ ವಿಜೇತ ತಂಡಗಳಿಗೆ ಪ್ರಶಸ್ತಿ ನೀಡಲಾಗುವುದು.

ಡಾ. ಬಾಬು ಜಗಜೀವನರಾಮ್ ಜಿಲ್ಲಾ ಜಯಂತೋತ್ಸವ ಸಮಿತಿ ನಿಯೋಗ, ಪಾಲಿಕೆ ಅಧಿಕಾರಿಗಳಿಗೆ ಭೇಟಿ ಮಾಡಿ, ಏ.5 ರಂದು ಡಾ. ಬಾಬು ಜಗಜೀವನರಾಮ್ ಜಯಂತೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ 10.45 ಗಂಟೆಗೆ ಅನ್ನಪೂರ್ಣಾ ಕ್ರಾಸ್ ಪುತ್ಥಳಿಯ ಎದುರುಗಡೆ ಆಯೋಜಿಸಲು ಹಾಗೂ ಇಲ್ಲಿಯೇ ಬಹಿರಂಗ ಸಭೆಯನ್ನು ನಡೆಸಲು ಅನುಮತಿ ನೀಡಬೇಕು.

ಸದರಿ ಬಹಿರಂಗ ಸಭೆಗೆ ಅತಿಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಖುರ್ಚಿ ಮತ್ತು ಪೆಂಡಾಲ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಜಯಂತೋತ್ಸವ ಕಾರ್ಯಕ್ರಮದ ಯಶಸ್ವಿಗೆ ಮಹಾನಗರ ಪಾಲಿಕೆ ವತಿಯಿಂದ ಎಲ್ಲರಿತಿಯ ಮೂಲ ಸೌಕರ್ಯ ಕಲ್ಪಿಸಬೇಕು ಇಲ್ಲಿ ಶಾಂತಿಯುತವಾಗಿ ಜಯಂತೋತ್ಸವ ಆಚರಿಸಲು ಪರವಾನಿಗೆ ಮತ್ತು ಸೂಕ್ತ ಬಂದೊಬಸ್ತ ಕಲ್ಪಿಸಬೇಕು ಎಂದು ಸಮಿತಿ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago