ಬಿಸಿ ಬಿಸಿ ಸುದ್ದಿ

ಪೌರಾಯುಕ್ತರಾಗಿ ಡಾ. ಕೆ. ಗುರುಲಿಂಗಪ್ಪ ಅಧಿಕಾರ ಸ್ವೀಕಾರ

ಶಹಾಬಾದ: ನಗರ ಸಭೆಯ ನೂತನ ಪೌರಾಯುಕ್ತರಾಗಿ ಡಾ. ಕೆ. ಗುರುಲಿಂಗಪ್ಪ ರವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಶಹಾಬಾದ ನಗರ ಸಭೆಗೆ ಪೌರಾಯುಕ್ತರಾಗಿ ಡಾ. ಕೆ. ಗುರುಲಿಂಗಪ್ಪ ನವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡರು.

ಇವರು ಹಿಂದೆ ರಾಯಚೂರು ನಗರ ಸಭೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಗುರುಲಿಂಗಪ್ಪ ಅವರು ಕಚೇರಿ ಸಿಬ್ಬಂದಿ, ನಗರಸಭಾ ಸದಸ್ಯರುಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನ ಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು, ನೀರನ್ನು ಪೋಲಾಗದಂತೆ ಸಮರ್ಪಕವಾಗಿ ನಾಗರಿಕರಿಗೆ ಸರಬರಾಜು ಮಾಡಲಾಗುವುದು.

ನೀರಿನ ಕರ ಕಟ್ಟದ ಮತ್ತು ಅನಧಿಕೃತ ಸಂಪರ್ಕಕ್ಕೆ ಕೂಡಲೇ ಕಡಿವಾಣ ಹಾಕಲಾಗುವುದು, ಯಾವುದೇ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ, ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ನಗರ ಸಭೆಗೆ ತುಂಬಾ ಕೆಲಸ ಆಗಬೇಕಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ನಗರ ಸಭಾ ಸದಸ್ಯರ ಜೊತೆಯಲ್ಲಿ ಚರ್ಚಿಸಿ ಎಲ್ಲಾ ಕೊರತೆ ನೀಗಿಸಲು ಪ್ರಯತ್ನಿಸಲಾಗುವುದು, ಸಾರ್ವಜನಿಕರು ನಗರ ಸಭೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಕಾಡಾ ಅಧ್ಯಕ್ಷ ಡಾ. ಎಮಎ ರಶೀದ, ನಗರ ಸಭಾ ಸದಸ್ಯ ನಾಗರಾಜ ಕರಣಿಕ, ಮಾಜಿ ಸದಸ್ಯ ಶರಣು ಪಗಲಾಪುರ, ಸಾಹೇಬಗೌಡ ಬೋಗುಂಡಿ, ಸ್ನೇಹಿಲ ಜಾಯಿ ಹಾಗೂ ಎಇಇ ಶರಣು ಪೂಜಾರ, ಕಚೇರಿ ವ್ಯವಸ್ಥಾಪಕ ಶರಣಗೌಡ ಪಾಟೀಲ, ಸಿಬ್ಬಂದಿ ಸಾಬಣ್ಣ ಸುಣಗಲಕರ, ನಾರಾಯಣ ರೆಡ್ಡಿ ಇನ್ನಿತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago