ಹೈದರಾಬಾದ್ ಕರ್ನಾಟಕ

ಸಚಿವ ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ; ಪ್ರಕರಣ ದಾಖಲು

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಿದ ಪತ್ರ ಬಂದಿದ್ದು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ ಎಂಬ ಅಚ್ಚರಿಯ ವಿಷಯವನ್ನು ಸ್ವತಃ ಸಚಿವ ಪ್ರಿಯಾಂಕ್ ಖರ್ಗೆ ಅವರೆ ಬಹಿರಂಗ ಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಜಿಲ್ಲಾ‌ ಕಚೇರಿಯಲ್ಲಿ ಕಿಕ್ಕಿರಿದು ಸೇರಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಯಲ್ಲಿ ಹೇಳಲು ಆಗದ ಮತ್ತು ಸುಶಿಕ್ಷಿತರು ಓದಲು ಸಹ ಆಗದ ಅತ್ಯಂತ ಕೀಳು ಮಟ್ಟದ ಶಬ್ದಗಳನ್ನು ಬಳಸಿ ಬೆದರಿಕೆ ಪತ್ರ ಬಂದಿದೆ. ನನ್ನ ಕೊಲೆ ಮಾಡಿಯಾದರೂ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಂತೆ ಕಾಣುತ್ತಿರುವ ಕಾಣದ ಕೈಗಳು ಈ ರೀತಿ ಬೆದರಿಕೆ ಹಾಕಿದರೆ ಇಲ್ಲಿ ಅಂಜುವವರು ಯಾರು ಇಲ್ಲ. ನಾವು ಸಂವಿಧಾನ ಅಡಿಯಲ್ಲಿ ಚುನಾವಣೆ ನಡೆಸುತ್ತೆವೆ ಎಂದರು.

ಚಿಂಚೋಳಿ ಸಂಸದರೆಂದೆ ಡಾ.ಜಾಧವ್ ಅವರನ್ನು ಕರೆದ ಸಚಿವರು, ಮುಕ್ತ ಚುನಾವಣೆ ಬಗ್ಗೆ ಅನುಮಾನಿಸಿ ಹೇಳಿಕೆ ನೀಡುತ್ತಿರುವುದು ಗಮನಿಸಿದರೆ ಗದ್ದಲ ಎಬ್ಬಿಸಿ ಗೆಲ್ಲುವ ಯೋಚನೆಯಲ್ಲಿ ಇದ್ದಾರೆ. ಇದು ಎಂದಿಗೂ ಸಾಧ್ಯವಿಲ್ಲ ಎಂದು ಮಾತಿನ ಮೂಲಕ ತಿವಿದರು.

ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣಪ್ಪ ಕಮಕನೂರ , ಪ್ರಮುಖರಾದ ಪ್ರವೀಣ ಪಾಟೀಲ್ ಹರವಾಳ, ಅರವಿಂದ ಚವ್ಹಾಣ, ಡಾ.ಕಿರಣ ದೇಶಮುಖ, ಶಿವಾನಂದ ಹೊನಗುಂಟ, ಈರಣ್ಣ ಝಳಕಿ ಇತರರು ಇದ್ದರು.

ಜೇವರ್ಗಿಯಿಂದ ಪ್ರಚಾರ ಆರಂಭ; ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇನವಾಜ್ ಹಾಗೂ ಬುದ್ಧ ವಿಹಾರ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ರಚಾರ ಶುರು ಮಾಡಿರುವ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯವರು 29 ರಂದು ಜೇವರ್ಗಿಯಿಂದ ಪ್ರಚಾರ ಆರಂಭ ಮಾಡಲಿದ್ದು, ಮಧ್ಯಾಹ್ನ 1.30ಕ್ಕೆ ಪ್ರಚಾರ ಸಭೆ ನಡೆಯಲಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಡಾ.‌ಅಜಯಸಿಂಗ್ ತಿಳಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago