ಕಲಬುರಗಿ: ಮಹಾನಗರ ಪಾಲಿಕೆಯ ತಾರಫೈಲ್ ವಾರ್ಡ್ ನಂ. 54 9ನೇ ಕ್ರಾಸ್ನಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ಬೇಸಿಗೆ ಕಾಲದಲ್ಲಿ ಎಲ್ಲರಿಗೂ ನೀರಿನ ಅವಶ್ಯಕತೆ ಇದೆ. ಈಗಿರುವ ನೀರಿನ ಪೈಪನಿಂದ ಜನರಿಗೆ ನೀರು ಸಿಗುತ್ತಿಲ್ಲ. ಈ ನೀರಿನ ಪೈಪು ಸುಮಾರು 250 ಅಡಿಗಳ ದೂರದಲ್ಲಿರುವ ಮನೆಗಳಿಗೆ ನೀರು ಸಿಗುತ್ತಿಲ್ಲ. ಆದಕಾರಣ ಜನರಿಗೆ ನೀರು ಕಲ್ಪಿಸಬೇಕು. ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ನಗರ ಪ್ರಧಾನ ಸಂಚಾಲಕ ಮಲ್ಲಿಕಾರ್ಜುನ ಕೊಪ್ಪುರ ಹಾಗೂ ನಗರ ಸಂಘಟನಾ ಸಂಚಾಲಕ ಸಂಜುಕುಮಾರ ಹುಗ್ಗಿ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ವಾರ್ಡ ನಂ. 54 9ನೇ ಕ್ರಾಸ್ನ ಕರಲಿಂಗ್ ವಾಡೆಕರ್ ಮನೆ ಮುಂದೆ ಸಾರ್ವಜನಿಕ ನೀರಿನ ಕೈ ಪಂಪು (ಬೋರ್ವೆಲ್)ಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಬರುತ್ತಿತ್ತು. ಆದರೆ ಮಾಹನಗರ ಪಾಲಿಕೆಯವರು ಈ ಕೈ ಪಂಪನ್ನು ತೆಗೆದು ವಿದ್ಯುತ್ ಚಾಲಿತ ಮೋಟಾರು ಮೂಲಕ ನೀರು ಒದಗಿಸುತ್ತೇವೆ ಎಂದು ಕೈ ಪಂಪು (ಹ್ಯಾಂಡ ಬೋರವೆಲ್) ತೆಗೆದುಕೊಂಡು ಹೋಗಿ ಒಂದು ವರ್ಷವಾಯಿತು.
ಆದರೆ ಇಲ್ಲಿಯವರೆಗೆ ಯಾವುದೇ ರೀತಿಯ ಕೈ ಪಂಪು ಇಲ್ಲಾ ಮೋಟಾರು ಕೂಡ ಅಳವಡಿಸಿರುವುದಿಲ್ಲ. ಸರಕಾರಿ ಆಸ್ಪತ್ರೆ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಬೀದಿ ದೀಪ ಇಲ್ಲದಿರುವುದರಿಂದ ಹಾವು ಹುಳ, ಕಸ-ಕಡ್ಡಿಗಳಿಂದ ಜನಸಾಮಾನ್ಯರಿಗೆ ಮತ್ತು ರಾತ್ರಿ ಹೊತ್ತಿನಲ್ಲಿ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ.
ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಮತ್ತು ಇನ್ನೂ 250 ಅಡಿಗಳ ನೀರಿನ ಪೈಪಲೈನ್ ವಿಸ್ತರಿಸಬೇಕು, ಈ ಬೇಡಿಕೆಗಳನ್ನು ಕೂಡಲೇ ಬಗೆಹರಿಸಬೇಕು ವಿಳಂಬವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…