ಕಲಬುರಗಿ: ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿನ ಪಠ್ಯ ಮಕ್ಕಳ ವಯಸ್ಸಿಗೆ ತಕ್ಕಂತೆ ಇರದೇ, ಅದು ಹೆಚ್ಚಾಗಿದ್ದು ಭಾರವೆನಿಸುತ್ತಿದೆ. ಇದರಿಂದ ಅವರ ಬೆಳವಣಿಗೆ ಕುಂಠಿತವಾಗುತ್ತಿದೆ. ಒತ್ತಡದಲ್ಲಿ ಓದುತ್ತಿರುವ ಮಕ್ಕಳಿಗೆ ಅವರ ಪಾಲಕ-ಪೋಷಕರು ಮನೆಗೆಲಸ ಮಾಡುವಂತಹ ನೈಜ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿಕ್ಷಣ ತಜ್ಞರು ಇದರತ್ತ ಲಕ್ಷ್ಯವಹಿಸಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ನಿವೃತ್ತ ಜಿಲ್ಲಾ ಕಾರ್ಮಿಕಾಧಿಕಾರಿ ಜಿ.ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.
ನಗರದ ಆಳಂದ ರಸ್ತೆಯ ಶಿವನಗರದಲ್ಲಿರುವ ‘ಮಲ್ಲಿನಾಥ ಮಹಾರಾಜ ಶಾಲೆ’ಯಲ್ಲಿ ಶುಕ್ರವಾರ ಸಂಜೆ ಜರುಗಿದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಪನ್ಯಾಸಕ ಎಚ್.ಬಿ.ಪಾಟೀಲ ಹಾಗೂ ಕ.ರಾ.ಪ್ರಾ.ಶಾ.ಶಿ.ಸಂಘದ ಆಳಂದ ತಾಲೂಕಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ವಿದ್ಯಾರ್ಥಿಗಳು ಎಷ್ಟೇ ಅಂಕಗಳು, ಪದವಿ ಗಳಿಸಿ, ಸಂಸ್ಕಾರ, ಮಾನವೀಯ ಮೌಲ್ಯಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಪ್ರಯೋಜನವಿಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಪ್ರಯತ್ನಶೀಲತೆ, ಶೃಜನಶೀಲತೆ, ಧನಾತ್ಮಕ ಚಿಂತನೆ ಮೈಗೂಡಿಸಿಕೊಂಡು ಮುನ್ನೆಡೆದರೆ, ಉನ್ನತ ಸಾಧನೆ ಸಾಧಿಸುವದರ ಜೊತೆಗೆ ನಿಮ್ಮ ಜೀವನ ಸುಂದರವಾಗಲು ಸಾಧ್ಯವಿದೆ. ಪಾಲಕ-ಪೋಷಕರು ತಮ್ಮ ಮಕ್ಕಳ ಆಸಕ್ತಿಯನ್ನು ಗಮನಿಸಿ, ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದರು.
ಕಾರ್ಯಕ್ರಮದಲ್ಲಿ ಕಸಾಪ ಉತ್ತರ ವಲಯದ ಅಧ್ಯಕ್ಷ ಪ್ರಭುಲಿಂಗ ಮುಲಗೆ, ಎನ್‍ಎಸ್‍ಎಸ್ ಕರಿಯರ್ ಅಕಾಡೆಮಿಯ ನಿರ್ದೇಶಕ ಸಂತೋಷ ಜವಳಿ, ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಜಿ.ಬಂಗರಗಿ, ಶಿಕ್ಷಕರಾದ ಬಸವರಾಜ ಪಾಟೀಲ, ಮಲ್ಲಿನಾಥ ಪಾಟೀಲ, ರಾಜಶೇಖರ ಪಾಟೀಲ ವೇದಿಕೆ ಮೇಲಿದ್ದರು. ಶಿಕ್ಷಕ ತುಕಾರಾಮ ಸಿಂಗೆ ಪ್ರಾರ್ಥಿಸಿ, ನಿರೂಪಿಸಿದರು.
ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.