ಕುಡಿಯುವ ನೀರು ಪೂರೈಕೆ ಪ್ರಥಮಾದ್ಯತೆ ಆಗಲಿ: ಭಂವರ್ ಸಿಂಗ್ ಮೀನಾ

0
71

ಕಲಬುರಗಿ: ಜಿಲ್ಲೆಯಲ್ಲಿ ಭೀಕರ ಬರಗಾಲ ಇರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲೆ, ಕೂಡಲೆ ನೀರು ಪೂರೈಕೆ ಮಾಡಬೇಕು. ಇದನ್ನು ಪ್ರಥಮಾದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ಬರಗಾಲ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತತರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಎಲ್ಲಾ ತಾಲೂಕ ಪಂಚಾಯತ್ ಕಾರ್ಯನಿವಾಹಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

Contact Your\'s Advertisement; 9902492681

ಬರಗಾಲ ಪರಿಹಾರ ಕಾಮಗಾರಿಗಳ ನಿರ್ವಹಣೆಯಲ್ಲಿ ವಿಫಲರಾದಲ್ಲಿ, ಸಂಬಂಧಿಸಿದ ಅಧಿಕಾರಿಗಳ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ “ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ” ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿ.ಇ.ಓ ಭಂವರ್ ಸಿಂಗ್ ಮೀನಾ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್, ಸೇರಿದಂತೆ ಯೋಜನಾ ನಿರ್ದೇಶಕ ಚಳಗೇರಿ ಹಾಗೂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಧುಮತಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here