ಬೀದರ್,: ಸೇಂಟ್ ಜೊಸೆಫ್ ಕೆಥೋಲಿಕ್ ಚರ್ಚ್ ಹಾಗೂ ಸೆಕ್ರೇಡ್ ಹಾರ್ಟ್ ಚರ್ಚ್ ವತಿಯಿಂದ ನಗರದಲ್ಲಿ ಶ್ರದ್ಧೆ, ಭಕ್ತಿಯಿಂದ ಶುಭ ಶುಕ್ರವಾರ ಆಚರಿಸಲಾಯಿತು.
ಕ್ರೈಸ್ತರು ಯೇಸುವಿನ ಪ್ರಾಣ ತ್ಯಾಗದ ಪವಿತ್ರ ಸ್ಮರಣೆಯ ಶಿಲುಬೆ ಹಾದಿಯ ಪ್ರಾರ್ಥನಾ ವಿಧಿಯನ್ನು ಭಕ್ತಿಯಿಂದ ನೆರವೇರಿಸಿದರು.
ಕೈಯಲ್ಲಿ ಶಿಲುಬೆಗಳನ್ನು ಹಿಡಿದುಕೊಂಡು ನಗರದ ನೆಹರೂ ಕ್ರೀಡಾಂಗಣ ಸಮೀಪದ ಸಾಯಿ ಶಾಲೆ ಮೈದಾನದಿಂದ ಮೆರವಣಿಗೆ ಆರಂಭಿಸಿದರು. ಜನರಲ್ ಕಾರ್ಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಭಗತ್‍ಸಿಂಗ್ ವೃತ್ತ, ತಹಸಿಲ್ದಾರ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಹರಳಯ್ಯ ವೃತ್ತ, ಗುದಗೆ ಆಸ್ಪತ್ರೆ ಕ್ರಾಸ್, ರೋಟರಿ ಕನ್ನಡಾಂಬೆ ವೃತ್ತದ ಮಾರ್ಗವಾಗಿ ಹಾಯ್ದು ಪುನಃ ಸಾಯಿ ಶಾಲೆಗೆ ಆಗಮಿಸಿ ಮುಕ್ತಾಯಗೊಳಿಸಿದರು.
ಮೆರವಣಿಗೆಯಲ್ಲಿ ಚಲಿಸುವ ಟ್ರ್ಯಾಕ್ಟರ್‍ನಲ್ಲೇ ಪ್ರದರ್ಶಿಸಿದ ಯೇಸು ಅವರ ಜೀವನದ ಅಂತಿಮ ಗಳಿಗೆಯ ರೂಪಕ ಗಮನ ಸೆಳೆಯಿತು. ಏಳು ಸ್ಥಳಗಳಲ್ಲಿ ಯೇಸು ಅವರು ಶಿಲುಬೆಯಲ್ಲಿ ನುಡಿದ ಏಳು ನುಡಿಗಳನ್ನು ಹೇಳಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್, ಕಾಂಗ್ರೆಸ್ ಮುಖಂಡ ಶ್ರೀಮಂತ್ ಸೂರ್ಯವಂಶಿ, ಕೆಥೋಲಿಕ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಸುರೇಶ್ ಎನ್. ದೊಡ್ಡಿ, ಫಾದರ್ ವಿಲ್ಸನ್, ಫಾದರ್ ಜೋನ್ ಪೌಲ್, ಫಾದರ್ ವಿನ್ಸೆಂಟ್, ಕನ್ಯಾಭಗಿನಿ, ಸಿಸ್ಟರ್ ಕ್ರಿಸ್ಟಿನಾ ಜಮಗಿ ಕಾಲೊನಿ, ಶಾಂತಕುಮಾರ್, ಅರುಣ ಪೌಲ್ ಮೊದಲಾದವರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…